ಬೆಳೆ ಸಮೀಕ್ಷೆ ಅವಧಿ ವಿಸ್ತರಣೆಗೆ ಕ್ಯಾಂಪ್ಕೋ ಮನವಿ |

September 14, 2023
7:41 PM
ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.

ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ.  ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ.  ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್‌ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ.‌ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್‌ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.

ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror