ಕಿಶೋರ್ ಕುಮಾರ್ ಕೊಡ್ಗಿ
ಮುಂಗಾರು ಹಂಗಾಮಿನಲ್ಲಿ ಬೆಳೆ ಸಮೀಕ್ಷೆ ಅವಧಿಯು ಸೆ.15 ಕ್ಕೆ ಕೊನೆಗೊಳ್ಳುತ್ತದೆ. ನಿಗದಿ ಅವಧಿಯಲ್ಲಿ ಸಮೀಕ್ಷೆಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಮೀಕ್ಷೆಯ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ಬೆಳೆ ಸಮೀಕ್ಷೆಯ ಅವಧಿಯು ಸೆ.15 ಕ್ಕೆ ಕೊನೆಯ ದಿನವಾಗಿರುತ್ತದೆ. ಗ್ರಾಮಕರಣಿಕರ ಮೂಲಕ ಅಥವಾ ಸಮೀಕ್ಷಕರ ಮೂಲಕ ರೈತರು ಬೆಳೆ ಸೆರ್ವೆ ಮಾಡಿಸುತ್ತಾರೆ. ಆದರೆ ಸರ್ವರ್ ಸಮಸ್ಯೆ ಇರುವುದರಿಂದ ಸಮೀಕ್ಷಾ ಕಾರ್ಯ ವೇಗದಲ್ಲಿ ನಡೆಯುತ್ತಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸಮೀಕ್ಷಾ ವಿಧಾನವೂ ಕಠಿಣವಾಗಿದೆ ಮತ್ತು ರೈತರ ಜಮೀನಿನಲ್ಲಿ ಅಂತರ್ಜಾಲ ಹಾಗೂ ಜಿಪಿಎಸ್ ಸಿಗದೆ ಸಮೀಕ್ಷೆ ವಿಳಂಬವೂ ಆಗುತ್ತಿದೆ.
ಹೀಗಾಗಿ ತಾಂತ್ರಿಕ ತೊಂದರೆಯಿಂದಾಗಿ ಅನಾನುಕೂಲತೆಯನ್ನು ಸರಿಪಡಿಸಲು ಹಾಗೂ ಸಮೀಕ್ಷೆಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿದಲ್ಲಿ ಎಲ್ಲಾ ರೈತರಿಗೂ ಅನುಕೂಲವಾಗುತ್ತದೆ. ಆದುದುರಿಂದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲು ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿಯಲ್ಲಿ ಕ್ಯಾಂಪ್ಕೋ ಒತ್ತಾಯಿಸಿದೆ
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…