ಮೇ17 ರಿಂದ ಕ್ಯಾಂಪ್ಕೊದಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭ | ಸದ್ಯ 1 ಕ್ವಿಂಟಾಲ್‌ ಅಡಿಕೆ ಖರೀದಿ ಮಿತಿ | ದಿನಕ್ಕೆ 25 ಬೆಳೆಗಾರರಿಗೆ ಅವಕಾಶ |

May 14, 2021
4:22 PM

ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ  ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.

ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ.  ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.

ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್‌  ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ  ಕಿಶೋರ್‌ ಕುಮಾರ್‌  ಕುಡ್ಗಿ ಹಾಗೂ  ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror