ಮೇ.17 ರಿಂದ ಕೃಷಿ ಉತ್ಪನ್ನಗಳ ಖರೀದಿ ಪುನರಾರಂಭಕ್ಕೆ ಕ್ಯಾಂಪ್ಕೋ ನಿರ್ಧರಿಸಿದೆ ಎಂದು ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಸರಕಾರದ ಮಾರ್ಗಸೂಚಿಯಂತೆ ಸಾಮಾಜಿಕ ಬದ್ಧತೆಯ ಕಾರಣದಿಂದ ಸಂಸ್ಥೆಯ ಎಲ್ಲಾ ಶಾಖೆಗಳಲ್ಲಿ ವಹಿವಾಟುಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಖರೀದಿ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗುತ್ತಿದೆ.
ಮೇ.17 ಸೋಮವಾರದಿಂದ ಕೇರಳ ಮತ್ತು ಕರ್ನಾಟಕದ ತನ್ನ ಎಲ್ಲಾ ಶಾಖೆಗಳಲ್ಲಿ ಅಡಿಕೆ ಮತ್ತು ಕೊಕ್ಕೊ ಬೀಜಗಳನ್ನು ಖರೀದಿಸಲಿದೆ. ಪ್ರತಿದಿನ ಗರಿಷ್ಠ 25 ಸದಸ್ಯರಿಂದ (ಉಪಶಾಖೆಗಳಲ್ಲಿ ವಾರದಲ್ಲಿ ಒಂದು ದಿನ ಗರಿಷ್ಠ 15 ಸದಸ್ಯರಿಂದ) ಸರದಿಯ ಪ್ರಕಾರ ತಲಾ ಗರಿಷ್ಠ ಒಂದು ಕ್ವಿಂಟಾಲ್ ಅಡಿಕೆಯನ್ನು ಖರೀದಿಸಲಿದ್ದು, ಕೊಕ್ಕೊ ಖರೀದಿಗೆ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ. ಸದ್ಯ ಕಾಳುಮೆಣಸಿನ ಖರೀದಿಯನ್ನು ಸ್ಥಗಿತಗೊಳಿಸಲಾಗಿದೆ.
ಆಯಾ ಪ್ರದೇಶಗಳಲ್ಲಿ ಜಾರಿಯಲ್ಲಿರುವ ಸರಕಾರದ ಕೋವಿಡ್ ಲಾಕ್ಡೌನ್ ನಿಯಮಗಳನ್ನು ಅನುಸರಿಸಿಕೊಂಡು ಮೇ.7 ಸೋಮವಾರದಿಂದ ಬೆಳಗ್ಗೆ 6 ಗಂಟೆಯಿಂದ 9 ಗಂಟೆಯವರೆಗೆ ಖರೀದಿ ನಡೆಯಲಿದ್ದು, ಸದಸ್ಯರು ಸಹಕರಿಸಬೇಕಾಗಿ ಕ್ಯಾಂಪ್ಕೋ ಅದ್ಯಕ್ಷ ಕಿಶೋರ್ ಕುಮಾರ್ ಕುಡ್ಗಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು ಹಾಗೂ…
ಮಾನವ-ವನ್ಯಜೀವಿ ಸಂಘರ್ಷ ಇರುವ ವಲಯಗಳಲ್ಲಿ ಉನ್ನತಾಧಿಕಾರಿಗಳು ಸತತ ನಿಗಾ ಇಟ್ಟು, ಜನರ ಅಮೂಲ್ಯ…
ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ಮಾಂಗಲ್ಯ ದೋಷ ಅಥವಾ ಮಾಂಗಲಿಕ ದೋಷ ಎಂಬುದು ಒಂದು…
ರೈತರ ಜಾನುವಾರುಗಳನ್ನು ಅರಣ್ಯದಲ್ಲಿ ಮೇಯಿಸುವ ವಿಚಾರವಾಗಿ ಹೊರಡಿಸಿದ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಶಿವಮೊಗ್ಗ…
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50…
ರಾಮ ಎಂದರೆ ಧರ್ಮ; ಸಮಾಜದ ಪ್ರತಿಯೊಬ್ಬರು ರಾಮನ ಅನುಶಾಸನಕ್ಕೆ ಒಳಪಡಬೇಕು ಎಂಬ ಭಾವದಿಂದ…