ಕ್ಯಾಂಪ್ಕೊ ಬ್ರ್ಯಾಂಡ್ ಅಡಿಕೆಯನ್ನು ಜಾಗತಿಕ ಮಟ್ಟದಲ್ಲಿ ಸ್ಥಾನ ಪಡೆಯುವಂತೆ ಮಾಡುವ ಉದ್ದೇಶದೊಂದಿಗೆ ಕ್ಯಾಂಪ್ಕೋ ತನ್ನ ಅಡಿಕೆ ಮಾರುಕಟ್ಟೆಯನ್ನು ಜಾಗತಿಕ ಮಟ್ಟಕ್ಕೆ ವಿಸ್ತರಿಸಲು ಪ್ರಯತ್ನ ನಡೆಸುತ್ತಿದೆ. ಅದರ ಭಾಗವಾಗಿ ಗುಣಮಟ್ಟದ 30 ಟನ್ ಅಡಿಕೆಯನ್ನು ಮಾಲ್ಡೀವ್ಸ್‌ಗೆ ರಫ್ತು ಮಾಡಿದೆ.……..ಮುಂದೆ ಓದಿ…..
ಅಡಿಕೆಯ ವಿವಿಧ ಸವಾಲುಗಳ ನಡುವೆ ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆಯಲ್ಲಿ ತನ್ನದೇ ಸ್ಥಾನವನ್ನು ಪಡೆಯುತ್ತಿದೆ. ಅಡಿಕೆ ಮಾರುಕಟ್ಟೆಯಲ್ಲಿ ಕ್ಯಾಂಪ್ಕೋ ಗುಣಮಟ್ಟಕ್ಕೆ ಹೆಸರುವಾಸಿಯಾಗಿದೆ. ಹೀಗಾಗಿ ಅಂತರಾಷ್ಟ್ರೀಯ ಮಟ್ಟದವರೆಗೂ ಇದೇ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಈ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲೂ ಕ್ಯಾಂಪ್ಕೋ ಬ್ರಾಂಡ್ ಅಡಿಕೆಗೆ ಪ್ರತ್ಯೇಕವಾದ ಸ್ಥಾನಮಾನ ಪಡೆಯಲು ಪ್ರಯತ್ನ ನಡೆಸುತ್ತಿದೆ.
ಮುಂದಿನ ದಿನಗಳಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಅಡಿಕೆ ಮತ್ತು ಅಡಿಕೆಯ ಉತ್ಪನ್ನಗಳನ್ನು ರಫ್ತು ಮಾಡುವ ಸಾಧ್ಯತೆಗಳನ್ನು ಅನ್ವೇಶಿಸಿ ,ಅಡಿಕೆ ಬೆಳೆಗಾರರನ್ನು ಆರ್ಥಿಕವಾಗಿ ಸದೃಢಗೊಳಿಸುವ ಕಾರ್ಯಕ್ಕೆ ಸಂಸ್ಥೆ ಇನ್ನಷ್ಟು ಪ್ರಯತ್ನಿಸಲಿದೆ. ಅಡಿಕೆ ಬೆಳೆಗಾರರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ಕ್ಯಾಂಪ್ಕೋ ಪ್ರಯತ್ನ ಪಡುವುದಾಗಿ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ…
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…