Advertisement
MIRROR FOCUS

ಅಡಿಕೆ ಕೌಶಲ್ಯ ಪಡೆ – 2.0 | ಕ್ಯಾಂಪ್ಕೋದಿಂದ ದೋಟಿ ಆಧಾರಿತ ಅಡಿಕೆ ಕೌಶಲ್ಯ ತರಬೇತಿ | ರೈತ ಪರವಾದ ಇನ್ನೊಂದು ಹೆಜ್ಜೆ |

Share

ಅಡಿಕೆ ಕೃಷಿಕ ಸಮುದಾಯದ ಸಮಸ್ಯೆ ಕುಗ್ಗಿಸಲು ಮಂಗಳೂರಿನ ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆ ದೋಟಿಯ ಮೂಲಕ ಅಡಿಕೆ ಕೌಶಲ್ಯ ಪಡೆ ತರಬೇತಿ ನೀಡಲು ನಿರ್ಧರಿಸಿದೆ. ಈ ಕಾರ್ಯಕ್ರಮಕ್ಕೆ ಕೃಷಿಕರ ಮಾಧ್ಯಮ ಅಡಿಕೆ ಪತ್ರಿಕೆ ಹಾಗೂ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ಗಳು ಸಹಭಾಗಿತ್ವ ನೀಡಲಿವೆ.

ಈ ಬಗ್ಗೆ  ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ, ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ , ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಶ್ರೀ ಪಡ್ರೆ , ಪತ್ರಿಕೆಯ ಸಂಪಾದಕ – ಪ್ರಕಾಶಕ ರಾಮಕೃಷ್ಣ ಶಾಸ್ತ್ರಿ  ಸಲಹೆ ನೀಡಿದರು.

ತರಬೇತಿಯು ಜನವರಿ ತಿಂಗಳಲ್ಲಿ ವಿಟ್ಲದ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನೆ ಸಂಸ್ಥೆಯಲ್ಲಿ(CPCRI)  ನಡೆಯಲಿದೆ. ಮೂರು ದಿನಗಳ ಈ ತರಬೇತಿಯಲ್ಲಿ ಆಯ್ದ ಇಪ್ಪತ್ತು ಜನರಿಗೆ ಅವಕಾಶ ಇರುತ್ತದೆ.

ಅನುಭವಿ ತರಬೇತುದಾರರು ಫೈಬರ್ ಕಾರ್ಬನ್ ದೋಟಿ ಬಳಸಿ ಅಡಿಕೆ ಕೊಯ್ಲು ಮತ್ತು ಸಿಂಪಡಣೆ ಮಾಡಲು ಕಲಿಸಲಿದ್ದಾರೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸದಸ್ಯರು ಶಿಬಿರದಲ್ಲಿ ಭಾಗವಹಿಸಬಹುದು. ಉಳಿದ ವಿವರಗಳನ್ನು ಮುಂದೆ ತಿಳಿಸಲಾಗುತ್ತದೆ ಎಂದು ಕ್ಯಾಂಪ್ಕೋ ತಿಳಿಸಿದೆ.

ಮೂರು ವರ್ಷ ಹಿಂದೆ ಕ್ಯಾಂಪ್ಕೋ ಅಡಿಕೆ ಮರ ಏರಿ ಕೊಯ್ಲು – ಸಿಂಪಡಣೆ ಮಾಡಲು ಎರಡು ತರಬೇತಿ ಶಿಬಿರ ನಡೆಸಿತ್ತು. ಈ ಶಿಬಿರದಲ್ಲಿ ಕೊನೆಗಾರ ವಿದ್ಯೆ ಕಲಿತ ಹಲವರು ಈ ವೃತ್ತಿ ಮುಂದುವರಿಸಿದ್ದು ಬದುಕನ್ನೂ ಹಸನು ಮಾಡಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

1 hour ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

1 hour ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

9 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

9 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

20 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago