ಕೊಳೆರೋಗದಿಂದ ಅಡಿಕೆ ಬೆಳೆ ನಾಶ | ಪರಿಹಾರ ನೀಡುವಂತೆ ಮುಖ್ಯಮಂತ್ರಿಯವರಿಗೆ ಕ್ಯಾಂಪ್ಕೊ ಮನವಿ

August 7, 2025
7:09 AM
ಈಗಾಗಲೇ ಎರಡು ಬಾರಿ ಔಷಧಿ ಸಿಂಪಡಿಸಿದರೂ ಎಡೆಬಿಡದೇ ಸುರಿಯುತ್ತಿರುವ ಮಳೆಯ ಪರಿಣಾಮ ಕೊಳೆರೋಗದಿಂದ ಈಗಾಗಲೇ ಅರ್ಧ ಬೆಳೆನಾಶವಾಗಿ ಹೋಗಿದೆ. ಹತಾಶೆಯಿಂದ ರೈತರು ಪರಿಹಾರಕ್ಕಾಗಿ ಸರಕಾರದ ಕಡೆ ಆಶಾಭಾವನೆಯಿಂದ ನೋಡುತ್ತಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣವೇ  ಗಮನಹರಿಸಬೇಕು. 

ನಿರಂತರ ಸುರಿಯುತ್ತಿರುವ ಮಳೆಯುಂದಾಗಿ ಮುಂಬರುವ ಅಡಿಕೆ ಬೆಳೆ ಭಾಗಶಃ ನಾಶವಾಗಿದ್ದು, ಇದೇ ರೀತಿ ಮಳೆ ಸುರಿದಲ್ಲಿ ಹೆಚ್ಚಿನ ಬೆಳೆ ನಾಶವಾಗಲಿದೆ. ಅಡಿಕೆ ಬೆಳೆನಾಶದ ಬಗ್ಗೆ ಸಮೀಕ್ಷೆ ನಡೆಸಿ , ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

Advertisement

ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ , ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಜಾಸ್ತಿ ಮುಂಗಾರು ಮಳೆ ಸುರಿಯುತ್ತಿದೆ. ಈಗಾಗಲೇ ಎರಡು ಬಾರಿ ಔಷಧಿ ಸಿಂಪಡಿಸಿದರೂ ಎಡೆಬಿಡದೇ ಸುರಿಯುತ್ತಿರುವ ಮಳೆಯ ಪರಿಣಾಮ ಕೊಳೆರೋಗದಿಂದ ಈಗಾಗಲೇ ಅರ್ಧ ಬೆಳೆನಾಶವಾಗಿ ಹೋಗಿದೆ. ಅಳಿದುಳಿದ ಬೆಳೆರಕ್ಷಣೆಗೆ ರೈತರು ಹೆಣಗಾಡುತ್ತಿದ್ದರೂ ಪರಿಣಾಮ ಶೂನ್ಯ. ಹತಾಶೆಯಿಂದ ರೈತರು ಪರಿಹಾರಕ್ಕಾಗಿ ಸರಕಾರದ ಕಡೆ ಆಶಾಭಾವನೆಯಿಂದ ನೋಡುತ್ತಿದ್ದಾರೆ. ಹೀಗಾಗಿ ಸರ್ಕಾರ ತಕ್ಷಣವೇ  ಗಮನಹರಿಸಬೇಕು. ಬೆಳೆನಷ್ಟದ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಂದ ಸಮೀಕ್ಷೆ ನಡೆಸಬೇಕು. ಬೆಳೆನಾಶದಿಂದ ಉಂಟಾದ ಆರ್ಥಿಕ ನಷ್ಟಕ್ಕೆ ಪರಿಹಾರ ನೀಡುವಂತೆ ಕ್ಯಾಂಪ್ಕೊ ಅಧ್ಯಕ್ಷರು ಸಮಸ್ತ ಬೆಳೆಗಾರರ ಪರವಾಗಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್
ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ
April 21, 2026
7:24 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror