ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ ಬೇಡಿಕೆಯನ್ನು ಪರಿಗಣಿಸುವುದಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.
ಬೆಂಗಳೂರಿನ ಕೃಷಿ ಮಾರಾಟ ಕಚೇರಿಯಲ್ಲಿ ಭೇಟಿ ಮಾಡಿದ ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್‌ಕುಮಾರ್ ನೇತೃತ್ವದ ನಿಯೋಗದ ಮನವಿ ಸ್ವೀಕರಿಸಿದ ಅವರು, ರಾಜ್ಯ ಸಹಕಾರ ಸಂಘಗಳ ಅಧಿನಿಯಮದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಯಾಂಪ್ಕೋ, ಬಹುರಾಜ್ಯ ಸಹಕಾರ ಸಂಘಗಳ ಅಧಿನಿಯಮದಡಿ ಬದಲಾವಣೆಯಾಗಿದ್ದರ ಬಗ್ಗೆ ಮಾಹಿತಿ ಪಡೆದರು. ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ವಿಧಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel