Advertisement
ಕೃಷಿ

ಜ.10 ರಿಂದ ಕ್ಯಾಂಪ್ಕೋ ವತಿಯಿಂದ ದೋಟಿ ತರಬೇತಿ ಶಿಬಿರ | ಲಾಂಛನ ಬಿಡುಗಡೆ |

Share
ಕ್ಯಾಂಪ್ಕೋ ವತಿಯಿಂದ ಜ.10  ರಿಂದ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ನಡೆಯುವ ದೋಟಿ ತರಬೇತಿ ಶಿಬಿರದ ಲಾಂಛನ ಶುಕ್ರವಾರ ಬಿಡುಗಡೆ ನಡೆಯಿತು. ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಅವರು ಕ್ಯಾಂಪ್ಕೋ ಚಾಕೋಲೇಟ್‌ ಪ್ಯಾಕ್ಟರಿಯಲ್ಲಿ ಬಿಡುಗಡೆಗೊಳಿಸಿದರು.
ಕ್ಯಾಂಪ್ಕೋ ನೇತೃತ್ವದಲ್ಲಿ ಅಡಿಕೆ ಪತ್ರಿಕೆ , ಸಿಪಿಸಿಆರ್‌ಐ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಹಯೋಗದೊಂದಿಗೆ ವಿಟ್ಲದ ಸಿಪಿಸಿಆರ್‌ಐ ವಠಾರದಲ್ಲಿ ಜ.10  ರಿಂದ ಮೂರು ದಿನಗಳ ಕಾಲ  ದೋಟಿ ತರಬೇತಿ ಶಿಬಿರ ನಡೆಯಲಿದೆ. ಈ ಶಿಬಿರದ ಲಾಂಛನವನ್ನು ಶುಕ್ರವಾರ ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ ಬಿಡುಗಡೆಗೊಳಿಸಿ, ಅಡಿಕೆ ಬೆಳೆಗಾರರರಿಗೆ ಭವಿಷ್ಯದಲ್ಲಿ ದೋಟಿಯ ಮೂಲಕ ಅಡಿಕೆ ಕೊಯ್ಲು ಹಾಗೂ ಸಿಂಪಡಣಾ ಕಾರ್ಯ ನಡೆಸಬೇಕಾದ ಅನಿವಾರ್ಯತೆ ಬರಬಹುದು. ಇದಕ್ಕಾಗಿ ಈಗಲೇ ತರಬೇತಿ ಅಗತ್ಯವಿದೆ. ಹೀಗಾಗಿ ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ  ಹಾಗೂ ಸಹಯೋಗ ಸಂಸ್ಥೆಗಳು ಮುಂದಡಿ ಇರಿಸಿದೆ.ಇದೊಂದು ಮಾದರಿ ಶಿಬಿರವಾಗಿದ್ದು ಸದ್ಯ ಆಯ್ದ ಶಿಬಿರಾರ್ಥಿಗಳಿಗೆ ಈ ತರಬೇತಿ ನಡೆಯಲಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಸಹಕಾರಿ ಸಂಘಗಳು ಈ ಶಿಬಿರವನ್ನು ಮುಂದುವರಿಸಬೇಕೆಂಬುದು ಅಪೇಕ್ಷೆ.
ಈ ಸಂದರ್ಭ ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ, ಫಾರ್ಮರ್‌ ಫಸ್ಟ್‌ ಟ್ರಸ್ಟ್‌ ಅಧ್ಯಕ್ಷ ಪಡಾರು ರಾಮಕೃಷ್ಣ ಭಟ್‌ , ಸಿಪಿಸಿಆರ್‌ ಐ ವಿಜ್ಞಾನಿ ಢಾ ಭವಿಷ್‌, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ , ಕ್ಯಾಂಪ್ಕೋ ಸಿಬಂದಿ ಈಶ್ವರ ನಾಯ್ಕ್‌ ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

9 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

18 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

19 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

23 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

23 hours ago