ಎಲ್ಲೆಲ್ಲಾ ಸಾಧ್ಯವೋ… ಹೇಗೆಲ್ಲಾ ಸಾಧ್ಯವೋ ಹಾಗೆ ಅಡಿಕೆ ಕಳ್ಳದಾರಿಯ ಮೂಲಕ ಆಗಮನ | ಅಡಿಕೆ ಆಮದು ತಡೆಗೆ ಕೇಂದ್ರದ ಸಹಕಾರ ಕೋರಿದ ಕ್ಯಾಂಪ್ಕೋ |

November 25, 2023
7:44 PM
ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಆಮದಾಗುತ್ತಿದ್ದು, ಇದರ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ಯಾಂಪ್ಕೋ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಅಡಿಕೆ ಆಮದು ತಡೆಗೆ ಕೇಂದ್ರ ಸರ್ಕಾರದ ನೆರವು ಅಗತ್ಯ ಇದೆ ಎಂದು ಪತ್ರದಲ್ಲಿ ಕ್ಯಾಂಪ್ಕೋ ತಿಳಿಸಿದೆ.

Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆಯು ಈಶಾನ್ಯ ರಾಜ್ಯಗಳ ಮೂಲಕ ಆಗಮನವಾಗುತ್ತಿದ್ದರೆ, ಅಲ್ಲಿ ಬಿಗು ಕ್ರಮವಾಗುತ್ತಿದ್ದಂತೆಯೇ ಶ್ರೀಲಂಕಾ ಸೇರಿದಂತೆ ಇತರೆಡೆಗಳಿಂದ ಹಡಗಿನ ಮೂಲಕವೂ ಆಗಮನವಾಯಿತು. ಇಲ್ಲೂ ತೆರಿಗೆ ಇಲಾಖೆ ಚುರುಕಾಗದಂತೆ ವಿಮಾನದ ಮೂಲಕ ಅಡಿಕೆ ಆಮದಾಗುತ್ತದೆ. ವಿಮಾನದ ಮೂಲಕ ಬರುವ ಅಡಿಕೆಯು ಮಹಾರಾಷ್ಟ್ರದ ಮಾರುಕಟ್ಟೆಗೆ ಬಂದು ದೇಶದ ವಿವಿದೆಡೆಗೆ ರವಾನೆಯಾಗುತ್ತದೆ. ಹೀಗಾಗಿ ಅಡಿಕೆ ಆಮದು ತಡೆ ಬಹುದೊಡ್ಡ ಸವಾಲಾಗಿದೆ. ಇದಕ್ಕಾಗಿ ಸರ್ಕಾರದ ನೆರವು ಅಗತ್ಯ ಇದೆ.

ಕಿಶೋರ್‌ ಕುಮಾರ್‌ ಕೊಡ್ಗಿ

ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಕ್ಯಾಂಪ್ಕೋ ಸದಾ ಬದ್ಧವಾಗಿದ್ದು, ಕೇಂದ್ರ ಸರ್ಕಾರವೂ ಅಡಿಕೆ ಬೆಳೆಗಾರರ ಪರವಾಗಿರುವ ಕಾರಣದಿಂದ ಬೆಳೆಗಾರರ ಹಿತಕಾಯಲು ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅಡಿಕೆ ಆಮದು ದೇಶೀಯ ಅಡಿಕೆ ಮಾರುಕಟ್ಟೆಯ ಮೇಲೆ ಗಂಭೀರವಾದ ಪರಿಣಾಮ ಉಂಟು ಮಾಡುತ್ತದೆ ಮತ್ತು ರೈತರಿಗೆ ಗಣನೀಯ ನಷ್ಟವನ್ನು ಉಂಟುಮಾಡುತ್ತದೆ. ಆರಂಭದಲ್ಲಿ ವಿವಿಧ ಬಂದರುಗಳ ಮೂಲಕ ಅಡಿಕೆ ಆಮದು ಆಗುತ್ತಿತ್ತು, ನಂತರ ದೇಶದ ಗಡಿಭಾಗಗಳಾದ ಸಿಲ್ಚಾರ್‌ ಸೇರಿದಂತೆ ವಿವಿಧ ಕಡೆಗಳಿಂದ ಅಸ್ಸಾಂ ಮೂಲಕ ಅಡಿಕೆ ಬರುತ್ತಿತ್ತು.ನಂತರ ಇಂಫಾಲ್‌ನಂತಹ  ವಿಮಾನ ನಿಲ್ದಾಣಗಳಿಂದ ಕೋಲ್ಕತ್ತಾ,  ಬೆಂಗಳೂರು, ಹೈದರಾಬಾದ್, ನಾಗ್ಪುರ ಮತ್ತು ಅಹಮದಾಬಾದ್ ಗಳಿಗೆ ಬರುತ್ತವೆ. ಪ್ರತೀ ಬ್ಯಾಗ್‌ ನಲ್ಲಿ 30 ಕೆಜಿಯಂತೆ ರವಾನೆಯಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷರು ವಿವರವಾಗಿ  ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ.

ಈಚೆಗೆ ಡ್ರೈಫ್ರುಟ್‌, ಹುರಿದ ಅಡಿಕೆ , ಮೀನಿನ ಉತ್ಪನ್ನದ ಹೆಸರಿನಲ್ಲಿಯೂ ಅಡಿಕೆ ಆಮದು ಆರಂಭವಾಗಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ. ಹೀಗಾಗಿ ಅಡಿಕೆ ಆಮದು ತಡೆಗೆ ತಕ್ಷಣ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷರು ಪ್ರಧಾನಿಗಳಿಗೆ ಮನವಿ ಮಾಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ 14 ರಂದು ವೃಷಭ ರಾಶಿಗೆ ಸೂರ್ಯನು ಪ್ರವೇಶಿಸುತ್ತಾ ಬುದಾದಿತ್ಯ ಯೋಗ
April 27, 2025
10:13 AM
by: ದ ರೂರಲ್ ಮಿರರ್.ಕಾಂ
ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ
April 26, 2025
9:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ
April 26, 2025
9:12 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |
April 26, 2025
1:58 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group