Advertisement
ಸುದ್ದಿಗಳು

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

Share

ಅಡಿಕೆ ಬೆಳೆಗಾರರು ಹಾಗೂ ಸಹಕಾರ ಸಂಘಗಳು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕ್ಯಾಂಪ್ಕೊ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ನಿಯೋಗದಲ್ಲಿ ಸಂಸದರುಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ,  ಬಿ.ವೈ. ರಾಘವೇಂದ್ರ,  ಕೋಟ ಶ್ರೀನಿವಾಸ ಪೂಜಾರಿ, ಹಾಗೂ ಅಡಿಕೆ ಮಹಾಮಂಡಲದ ಅಧ್ಯಕ್ಷ ಆರಗ ಜ್ಞಾನೇಂದ್ರ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್‌ಚಂದ್ರ ಹಾಗೂ ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ ಇದ್ದರು. ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ಅಡಿಕೆ ಕ್ಷೇತ್ರ ಎದುರಿಸುತ್ತಿರುವ ಹಲವು ಗಂಭೀರ ಸಮಸ್ಯೆಗಳನ್ನು ತಂದಿತು.

ಮುಖ್ಯವಾಗಿ ವಿವಿಧ HS ಕೋಡ್‌ಗಳ ದುರುಪಯೋಗ ಮಾಡಿಕೊಂಡು ನಡೆಯುತ್ತಿರುವ ಅಕ್ರಮ ಅಡಿಕೆ ಆಮದು ಹಾಗೂ ಕಳೆದ ಅಕ್ಟೋಬರ್‌ನಿಂದ “ಹುರಿದ ಅಡಿಕೆ (Roasted Nuts)” ಹೆಸರಿನಲ್ಲಿ ದೇಶದೊಳಗೆ ಪ್ರವೇಶಿಸುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಬಗ್ಗೆ ವಿವರಿಸಲಾಯಿತು.

ಧಾರಣೆ ಕುಸಿತದ ಆತಂಕ : ಕನಿಷ್ಠ ಆಮದು ಬೆಲೆ (MIP) ನಿಯಮಗಳನ್ನು ಉಲ್ಲಂಘಿಸಿ ಕಡಿಮೆ ದರದಲ್ಲಿ ವಿದೇಶಿ ಅಡಿಕೆ ದೇಶೀಯ ಮಾರುಕಟ್ಟೆಗೆ ಪ್ರವೇಶಿಸುತ್ತಿರುವುದರಿಂದ ಅಡಿಕೆ ಧಾರಣೆಯಲ್ಲಿ ತೀವ್ರ ಕುಸಿತ ಉಂಟಾಗುತ್ತಿರುವ ಬಗ್ಗೆ ನಿಯೋಗವು ಕಳವಳ ವ್ಯಕ್ತಪಡಿಸಿತು.

‘ಒಂದು ದೇಶ – ಒಂದು ತೆರಿಗೆ’ ಜಾರಿಗೆ ಆಗ್ರಹ :  ಖಾಸಗಿ ವ್ಯಾಪಾರಿಗಳ ತೆರಿಗೆ ವಂಚನೆಯಿಂದ ಪ್ರಾಮಾಣಿಕವಾಗಿ ವ್ಯವಹರಿಸುವ ಸಹಕಾರ ಸಂಘಗಳ ಮೇಲೆ ಹೆಚ್ಚುವರಿ ತೆರಿಗೆ ಹೊರೆ ಬೀಳುತ್ತಿದೆ. ಇದನ್ನು ತಪ್ಪಿಸಲು “ಒಂದು ದೇಶ – ಒಂದು ತೆರಿಗೆ (One Nation One Tax)” ನೀತಿಯನ್ನು ಜಾರಿಗೆ ತರಬೇಕೆಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್. ಸತೀಶ್‌ಚಂದ್ರ ಒತ್ತಾಯಿಸಿದರು.

ಅಮಿತ್ ಶಾ ಭರವಸೆ : ನಿಯೋಗದ ಮನವಿಗೆ ಸ್ಪಂದಿಸಿದ ಅಮಿತ್ ಶಾ ಅವರು ಅಕ್ರಮ ಆಮದು ಮತ್ತು ಸಂಬಂಧಿತ ಅಕ್ರಮಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಸಹಕಾರ ಕ್ಷೇತ್ರ ಹಾಗೂ ಅದರ ಸದಸ್ಯರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ತಿಳಿಸಿದರು.

ನಿರ್ಮಲಾ ಸೀತಾರಾಮನ್ ಜೊತೆ ತೆರಿಗೆ ವಿಚಾರ ಚರ್ಚೆ : ಬಳಿಕ ನಿಯೋಗವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರೈತರು ಎದುರಿಸುತ್ತಿರುವ ತೆರಿಗೆ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟಿತು.

ಅಡಿಕೆ ತೋಟಗಳಲ್ಲಿ ಬೋರ್ಡೋ ದ್ರಾವಣ ತಯಾರಿಕೆಗೆ ಬಳಸುವ ಮೈಲುತುತ್ತ (Copper Sulphate) ಮೇಲಿನ ಜಿಎಸ್‌ಟಿ ತಾರತಮ್ಯವನ್ನು ಪ್ರಮುಖವಾಗಿ ಪ್ರಸ್ತಾಪಿಸಲಾಯಿತು.  ಸೂಕ್ಷ್ಮ ಪೋಷಕಾಂಶವಾಗಿ ಬಳಸಿದರೆ 5% ಜಿಎಸ್‌ಟಿ ಮಾತ್ರ ವಿಧಿಸಲಾಗುತ್ತಿದ್ದು, ಅದೇ ವಸ್ತುವನ್ನು ಶಿಲೀಂಧ್ರನಾಶಕವಾಗಿ ಬಳಸಿದರೆ 18% ಜಿಎಸ್‌ಟಿ ವಿಧಿಸಲಾಗುತ್ತಿದೆ. ಈ ತಾರತಮ್ಯವನ್ನು ನಿವಾರಿಸುವಂತೆ ನಿಯೋಗ ಒತ್ತಾಯಿಸಿತು.

ಈ ಕುರಿತು ಪ್ರತಿಕ್ರಿಯಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಅಕ್ರಮ ಮಾರ್ಗಗಳಿಂದ ನಡೆಯುತ್ತಿರುವ ಅಡಿಕೆ ಆಮದಿನ ಮೇಲೆ ಈಗಾಗಲೇ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದ್ದು, ದೇಶದ ಎಲ್ಲ ಬಂದರುಗಳಿಗೆ ವಿಶೇಷ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕ್ಯಾಂಪ್ಕೊ ವಿಶ್ವಾಸ : ಒಟ್ಟಾರೆ ಅಡಿಕೆ ಬೆಳೆಗಾರರು ಹಾಗೂ ಸಹಕಾರ ಸಂಘಗಳ ಹಿತರಕ್ಷಣೆಗೆ ನಡೆದ ಈ ದೆಹಲಿ ಭೇಟಿ ಯಶಸ್ವಿಯಾಗಿದ್ದು, ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಕ್ಯಾಂಪ್ಕೊ ತಿಳಿಸಿದೆ. ಮುಂದಿನ ದಿನಗಳಲ್ಲಿಯೂ ಸದಸ್ಯ ಬೆಳೆಗಾರರ ಹಿತಾಸಕ್ತಿಗಾಗಿ ನಿರಂತರವಾಗಿ ಶ್ರಮಿಸುವುದಾಗಿ ಕ್ಯಾಂಪ್ಕೊ ವಿಶ್ವಾಸ ವ್ಯಕ್ತಪಡಿಸಿದೆ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

A high-level CAMPCO delegation met Union Home and Cooperation Minister Amit Shah and Finance Minister Nirmala Sitharaman in New Delhi, seeking action against illegal arecanut imports, implementation of fair taxation policies, and GST relief on copper sulphate used in arecanut cultivation. The Union Ministers assured strict monitoring of illegal imports and expressed support for the cooperative sector.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

5 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

5 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

16 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

21 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

22 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

22 hours ago