ಅಡಿಕೆ ಕನಿಷ್ಟ ಆಮದು ದರ ಹೆಚ್ಚಿಸಿದ ಕೇಂದ್ರ | ಕ್ಯಾಂಪ್ಕೊ ಶ್ಲಾಘನೆ |

February 15, 2023
1:27 PM

ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ  ಸರ್ಕಾರವು ಅಡಿಕೆಯ ಕನಿಷ್ಠ ಆಮದು ಬೆಲೆ ಯನ್ನುಈಗ ಇರುವ ಕೆಜಿಗೆ 251ರೂ.ಗಳಿಂದ  351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರವನ್ನು ಕ್ಯಾಂಪ್ಕೋ ಸ್ವಾಗತಿಸಿದೆ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದೆ.

Advertisement
Advertisement

ಅಡಿಕೆ ಆಮದು ರದ ಏರಿಕೆಯ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ. ಕಳೆದ ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯದರ ಅನಿಶ್ಚಿತತೆಯಿಂದ ಕೂಡಿತ್ತು ಮತ್ತು ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದುಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ. ಅಡಿಕೆಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ಮಂಡಳಿ ಕೇಂದ್ರ ಸರಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

Advertisement

ರಾಜ್ಯ ಗೃಹಸಚಿವರಾದ ಆರಗ  ಜ್ಞಾನೇಂದ್ರ ನೇತೃತ್ವದಲ್ಲಿ ಕ್ಯಾಂಪ್ಕೊ, ಮ್ಯಾಮ್ಕೊಸ್, ಟಿಎಸ್ಎಸ್, ತುಮ್ಕೋಸ್ ,ಅಡಿಕೆ ಮಾರಾಟ ಮಹಾಮಂಡಳಿ ಮತ್ತು ಸಹಕಾರಿ ರಂಗದ ಹಿರಿಯರಾದ ಮಂಜಪ್ಪ ಹೊಸಬಾಳೆ ಹಾಗೂ ಸಹಕಾರ ಭಾರತೀಯ ರಾಷ್ಟ್ರೀಯ ನಾಯಕರಾದ ಮಾನ್ಯ ರಮೇಶ್‌ ವೈದ್ಯ  ಮುಂತಾದ ಸದಸ್ಯರನ್ನೊಳಗೊಂಡ ನಿಯೋಗವು ದೆಹಲಿಗೆ ತೆರಳಿ ಆಮದು ಕನಿಷ್ಠ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ಮತ್ತು ವಾಣಿಜ್ಯ ಸಚಿವರಲ್ಲಿ ಮನವಿಯನ್ನು ಮಾಡಿತ್ತು. ನಂತರದ ದಿನಗಳಲ್ಲಿ ಕ್ಯಾಂಪ್ಕೊದ ನಿರಂತರ ಸಂಪರ್ಕ ಮತ್ತು ಒತ್ತಡದ ಪರಿಣಾಮ ಕೇಂದ್ರ ಸರಕಾರ ಸ್ಪಂದಿಸಿ ಆದೇಶ ಹೊರಡಿಸಿದೆ. ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆಯವರು ಪುತ್ತೂರಿನಲ್ಲಿ ಕ್ಯಾಂಪ್ಕೊದ ಕೃಷಿಯಂತ್ರ ಮೇಳ ಉದ್ಘಾಟನಾ ಸಮಾರಂಭದಲ್ಲಿ ಘೋಷಣೆ ಮಾಡಿದ್ದರು ಎಂದು ಕ್ಯಾಂಪ್ಕೋ ನೆನಪಿಸಿದೆ.

ಅಡಿಕೆಯ ಕನಿಷ್ಠ ಆಮದು ಬೆಲೆಯ ಹೆಚ್ಚಳದಿಂದ ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದ್ದು ರೈತರು ಸುಳ್ಳು ಸುದ್ಧಿಗಳಿಗೆ ಕಿವಿಗೊಡದೆ ಅಗತ್ಯಕ್ಕೆ ತಕ್ಕಂತೆ ಮಾರಾಟ ಮಾಡಿ ಅಡಿಕೆ ಧಾರಣೆಯ ಸ್ಥಿರತೆಗೆ ಸಹಕಾರ ನೀಡುವಂತೆ ಕ್ಯಾಂಪ್ಕೊ ಆಡಳಿತ ಮಂಡಳಿ ಮನವಿ ಮಾಡುತ್ತದೆ ಎಂದು ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror