ಅಡಿಕೆಯ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಅಡಿಕೆಯ ಕನಿಷ್ಠ ಆಮದು ಬೆಲೆ ಯನ್ನುಈಗ ಇರುವ ಕೆಜಿಗೆ 251ರೂ.ಗಳಿಂದ 351 ರೂಪಾಯಿಗಳಿಗೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಈ ನಿರ್ಧಾರವನ್ನು ಕ್ಯಾಂಪ್ಕೋ ಸ್ವಾಗತಿಸಿದೆ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದೆ.
ಅಡಿಕೆ ಆಮದು ರದ ಏರಿಕೆಯ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಪರಿಣಾಮ ಬೀರಲಿದೆ. ಕಳೆದ ಕೆಲವು ತಿಂಗಳುಗಳಿಂದ ಏರಿಳಿತದ ಮೂಲಕ ಮಾರುಕಟ್ಟೆಯಲ್ಲಿ ಅಡಿಕೆಯದರ ಅನಿಶ್ಚಿತತೆಯಿಂದ ಕೂಡಿತ್ತು ಮತ್ತು ರೈತರಲ್ಲಿ ಹತಾಶೆಯ ಭಾವನೆಯನ್ನು ಮೂಡಿಸಿತ್ತು. ಕೇಂದ್ರದ ಕ್ರಮದಿಂದಾಗಿ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಯ ಆಮದಿನ ಮೇಲೆ ಭಾರಿ ಹೊಡೆತ ಬೀಳಲಿದ್ದು, ಉತ್ತಮ ಗುಣಮಟ್ಟದ ದೇಶೀ ಅಡಿಕೆಗೆ ಬೇಡಿಕೆ ಬರಲಿದೆ ಮತ್ತು ದರದಲ್ಲಿ ಸ್ಥಿರತೆ ಕಾಣಲಿದ್ದುಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದೆ. ಅಡಿಕೆಬೆಳೆಗಾರರ ಹಿತರಕ್ಷಕ ಕ್ಯಾಂಪ್ಕೊ ಸಂಸ್ಥೆಯ ಆಡಳಿತ ಮಂಡಳಿ ಕೇಂದ್ರ ಸರಕಾರದ ಕ್ರಮಕ್ಕೆ ಕೃತಜ್ಞತೆ ಸಲ್ಲಿಸುತ್ತಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.
ರಾಜ್ಯ ಗೃಹಸಚಿವರಾದ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಕ್ಯಾಂಪ್ಕೊ, ಮ್ಯಾಮ್ಕೊಸ್, ಟಿಎಸ್ಎಸ್, ತುಮ್ಕೋಸ್ ,ಅಡಿಕೆ ಮಾರಾಟ ಮಹಾಮಂಡಳಿ ಮತ್ತು ಸಹಕಾರಿ ರಂಗದ ಹಿರಿಯರಾದ ಮಂಜಪ್ಪ ಹೊಸಬಾಳೆ ಹಾಗೂ ಸಹಕಾರ ಭಾರತೀಯ ರಾಷ್ಟ್ರೀಯ ನಾಯಕರಾದ ಮಾನ್ಯ ರಮೇಶ್ ವೈದ್ಯ ಮುಂತಾದ ಸದಸ್ಯರನ್ನೊಳಗೊಂಡ ನಿಯೋಗವು ದೆಹಲಿಗೆ ತೆರಳಿ ಆಮದು ಕನಿಷ್ಠ ಬೆಲೆಯನ್ನು ಹೆಚ್ಚಿಸುವಂತೆ ಕೃಷಿ ಮತ್ತು ವಾಣಿಜ್ಯ ಸಚಿವರಲ್ಲಿ ಮನವಿಯನ್ನು ಮಾಡಿತ್ತು. ನಂತರದ ದಿನಗಳಲ್ಲಿ ಕ್ಯಾಂಪ್ಕೊದ ನಿರಂತರ ಸಂಪರ್ಕ ಮತ್ತು ಒತ್ತಡದ ಪರಿಣಾಮ ಕೇಂದ್ರ ಸರಕಾರ ಸ್ಪಂದಿಸಿ ಆದೇಶ ಹೊರಡಿಸಿದೆ. ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸುವ ಬಗ್ಗೆ ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭ ಕರಂದ್ಲಾಜೆಯವರು ಪುತ್ತೂರಿನಲ್ಲಿ ಕ್ಯಾಂಪ್ಕೊದ ಕೃಷಿಯಂತ್ರ ಮೇಳ ಉದ್ಘಾಟನಾ ಸಮಾರಂಭದಲ್ಲಿ ಘೋಷಣೆ ಮಾಡಿದ್ದರು ಎಂದು ಕ್ಯಾಂಪ್ಕೋ ನೆನಪಿಸಿದೆ.
ಅಡಿಕೆಯ ಕನಿಷ್ಠ ಆಮದು ಬೆಲೆಯ ಹೆಚ್ಚಳದಿಂದ ಅಡಿಕೆ ಮಾರುಕಟ್ಟೆ ಚೇತರಿಕೆಯಾಗಲಿದ್ದು ರೈತರು ಸುಳ್ಳು ಸುದ್ಧಿಗಳಿಗೆ ಕಿವಿಗೊಡದೆ ಅಗತ್ಯಕ್ಕೆ ತಕ್ಕಂತೆ ಮಾರಾಟ ಮಾಡಿ ಅಡಿಕೆ ಧಾರಣೆಯ ಸ್ಥಿರತೆಗೆ ಸಹಕಾರ ನೀಡುವಂತೆ ಕ್ಯಾಂಪ್ಕೊ ಆಡಳಿತ ಮಂಡಳಿ ಮನವಿ ಮಾಡುತ್ತದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…