ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬಗ್ಗೆ ಸಂಶೋಧನೆ ಹಾಗೂ ಅಭಿವೃದ್ಧಿಗೆ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನಕ್ಕೆ ಅನುದಾನ ಘೋಷಿಸಬೇಕೆಂಬ ಅಪೇಕ್ಷೆ ಹೊಂದಿತ್ತು. ಆದರೆ ತೀರ್ಥಹಳ್ಳಿಯ ತೋಟಗಾರಿಕಾ ಇಲಾಖೆಗೆ ಹಳದಿ ಎಲೆರೋಗ ಮತ್ತು ಎಲೆಚುಕ್ಕಿರೋಗದ ಬಗ್ಗೆ ಸಂಶೋಧನೆ ನಡೆಸಲು 10 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿರುವುದನ್ನು ಕ್ಯಾಂಪ್ಕೋ ಸ್ವಾಗತಿಸುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಕೃಷಿಯಲ್ಲಿ ತಂತ್ರಜ್ಞಾನ ಮತ್ತು ವೈಜ್ಞಾನಿಕ ಪದ್ಧತಿಗಳ ಅಳವಡಿಕೆಗೆ ಉತ್ತೇಜನ ಮತ್ತು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರಫ್ತಿಗೆ ಒತ್ತು ನೀಡುವ ಮೂಲಕ ಸಮಗ್ರ ಕೃಷಿ ಪದ್ಧತಿಯ ಉತ್ತೇಜನಕ್ಕೆ ಬಜೆಟಲ್ಲಿ ಪ್ರೋತ್ಸಾಹ ನೀಡಲಾಗಿದೆ. 3 ಲಕ್ಷದಿಂದ 5 ಲಕ್ಷದವರೆಗೆ ಬಡ್ಡಿರಹಿತಸಾಲ, ಉತ್ತರ ಕರ್ನಾಟಕದ ರೈತರಿಗೆ ಸಹಾಯಧನ, ನೀರಾವರಿಗೆ ಅತೀ ಹೆಚ್ಚಿನ ಹಣ ಮಂಜೂರು, ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಮುಂತಾದ ಯೋಜನೆಗಳ ಮೂಲಕ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಜೆಟಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…