ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ ಪ್ರಕಟಿಸಿರುವುದಕ್ಕೆ ಕ್ಯಾಂಪ್ಕೊ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ರೀತಿಯ ವರದಿಗಳನ್ನು ತಿರುಚಿರುವ ವಿಶ್ವಆರೋಗ್ಯ ಸಂಸ್ಥೆ ಮತ್ತು IARC ವಿರುದ್ಧ ತುರ್ತು ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಜೆ.ಪಿ.ನಡ್ಡಾ ಅವರನ್ನು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಒತ್ತಾಯಿಸಿದ್ದಾರೆ.…..ಮುಂದೆ ಓದಿ….
ಮೂಲ ಸಂಶೋಧನಾ ವರದಿಗಳಲ್ಲಿ ತಂಬಾಕು ಸೇವನೆಯ ಪರಿಣಾಮದ ಕುರಿತು ಕೇಂದ್ರೀಕರಿಸಿ ಸಂಶೋಧನೆ ನಡೆಸಲಾಗಿತ್ತು. ಹಾಗಿದ್ದರೂ ಅಡಿಕೆ ಕ್ಯಾನ್ಸರ್ ಕಾರಕವೆಂದು ಬಿಂಬಿಸುವಸಲುವಾಗಿ ಮಾದರಿ ಸಂಖ್ಯೆ ಮತ್ತು ಶೀರ್ಷಿಕೆಯನ್ನು ತಿರುಚಿ ವರದಿ ಪ್ರಕಟಿಸಿರುವ WHI ಮತ್ತು IARC ಕ್ರಮ ಅಕ್ಷಮ್ಯ. ಇದು ಅಡಿಕೆ ಕೃಷಿಯನ್ನೆ ಜೀವನಾಧಾರವಾಗಿ ನಂಬಿರುವ ರೈತರ ಬದುಕಿಗೆ ಬಲವಾದ ಪೆಟ್ಟು ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯು ಅಡಿಕೆಯನ್ನು ವರ್ಗೀಕರಿಸುವುದರ ಕುರಿತು ನ್ಯಾಯೋಚಿತ ವಿಮರ್ಶೆ ನಡೆಸಿ ರೈತರಿಗೆ ನ್ಯಾಯ ದೊರಕಿಸಿಕೊಡುವಂತೆ ಕೇಂದ್ರ ಸಚಿವರಲ್ಲಿ ವಿನಂತಿ ಮಾಡಲಾಗಿದೆ.
ಲಕ್ಷಾಂತರ ಜನರಿಗೆ ಜೀವನ ಕಟ್ಟಿಕೊಟ್ಟಿರುವ ಅಡಿಕೆಯ ತಪ್ಪುವರ್ಗೀಕರಣವನ್ನು ಸರಿಪಡಿಸಿ ರೈತರ ಬದುಕಿನ ದಾರಿದೀಪವಾಗುವಂತೆ ಮಾಡಲು ಕೇಂದ್ರ ಸರಕಾರ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ಕ್ಯಾಂಪ್ಕೊ ವಿನಂತಿ ಮಾಡುತ್ತಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
The Central Arecanut & Cocoa Marketing & Processing Cooperative Ltd. (CAMPCO), representing lakhs of Arecanut Farmers, has formally appealed to the Hon’ble Union Minister for Health & Family Welfare, Sri.Jagat Prakash Nadda, seeking urgent action against the alleged data manipulation by the World Health Organization (WHO) and the International Agency for Research on Cancer (IARC).
CAMPCO highlighted that the WHO/IARC misrepresented research findings to wrongly implicate Arecanut as Carcinogenic. Original studies primarily focused on tobacco, yet Arecanut was unjustifiably included with manipulated sample sizes and misleading titles. These distortions have severely impacted the livelihoods of lakhs of Arecanut Farmers who depend on the crop for sustenance.
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…
ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…
ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…