ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಕ್ಯಾಂಪ್ಕೋ ಆಗ್ರಹ |

January 23, 2024
8:44 PM
ಅಡಿಕೆ ಆಮದು ತಡೆಗೆ ಕ್ರಮ ಕೈಗೊಳ್ಳಲು ಕ್ಯಾಂಪ್ಕೋ ಸರ್ಕಾರವನ್ನು ಒತ್ತಾಯಿಸಿದೆ.

ಈಚೆಗೆ ವಿದೇಶಿ ಅಡಿಕೆಯು ವಿವಿಧ ಮಾರ್ಗಗಳಲ್ಲಿ ಕಳ್ಳಸಾಗಾಣಿಕೆಯ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಇದರಿಂದ ಸರ್ಕಾರಕ್ಕೂ ನಷ್ಟವಿದೆ ಹಾಗೂ ಅಡಿಕೆ ಬೆಳೆಗಾರರಿಗೂ ಸಂಕಷ್ಟ ಪರಿಸ್ಥಿತಿ ಇದೆ. ಇದಕ್ಕಾಗಿ ತಕ್ಷಣವೇ ಸರ್ಕಾರ ಅಡಿಕೆ ಆಮದು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಒತ್ತಾಯಿಸಿದ್ದಾರೆ.ಮುಂದೆ ಓದಿ

ಕಿಶೋರ್‌ ಕುಮಾರ್‌ ಕೊಡ್ಗಿ

ಮಾಹಿತಿ ಪ್ರಕಾರ ಈಚೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಗೋ ಟರ್ಮಿನಲ್‌ ಮೂಲಕ ಅಡಿಕೆಯು ವಿವಿಧ ಕಡೆಗಳಿಂದ ಆಗಮನವಾಗಿ ಇಲ್ಲಿಂದ ಬೇರೆ ಬೇರೆ ಕಡೆಗೆ ರವಾನೆಯಾಗುತ್ತಿದೆ.ಅಡಿಕೆ ಬೆಳೆಯುವ ಮಲೆನಾಡು ಹಾಗೂ ಕರಾವಳಿ ಭಾಗಗಳಿಗೂ ಅಡಿಕೆ ರವಾನೆಯಾಗುತ್ತಿರುವುದು ಅಡಿಕೆ ಕಳ್ಳಸಾಗಾಣಿಕೆಯ ಕದಂಬ ಬಾಹು ಹರಡಿಕೊಂಡಿರುವುದರ ಬಗ್ಗೆ ಕ್ಯಾಂಪ್ಕೋ ಕಳವಳ ವ್ಯಕ್ತಪಡಿಸಿದೆ.ಈ ಮಾದರಿಯ ಕಳ್ಳಸಾಗಾಣಿಕೆಯನ್ನು ಸರ್ಕಾರಗಳು ತಡೆದರೆ, ಅಡಿಕೆ ಧಾರಣೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತಕ್ಕಾಗಿ ಸದಾ ದುಡಿಯುತ್ತಿರುವ ಸಹಕಾರಿ ಸಂಸ್ಥೆಗಳಿಗೆ  ಮತ್ತು ಅಡಿಕೆ ಬೆಳೆಗಾರರಿಗೂ ನೆರವಾಗುತ್ತದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ ಹೇಳಿದ್ದಾರೆ.ಮುಂದೆ ಓದಿ

ಈಗಾಗಲೇ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಕ್ಯಾಂಪ್ಕೋ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೂ ಕ್ಯಾಂಪ್ಕೋ ಪತ್ರದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಪತ್ರದ ಮೂಲಕ ಒತ್ತಾಯಿಸಿದೆ.

Imported Arecanuts are entering India through various routes. Thus affecting farmers and Arecanut Market. Thus Campco President Kishore Kumar Kodgi urged the government to take immediate action.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror