Advertisement
ಸುದ್ದಿಗಳು

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

Share

ಪುತ್ತೂರಿನ ಮರೀಲ್‌ನಲ್ಲಿರುವ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್ ವತಿಯಿಂದ ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ವಸತಿ ನಿಲಯದಲ್ಲಿ ಯೋಗ ಕಾರ್ಯಕ್ರಮ ಹಾಗೂ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾಭಾರತಿ ದಕ್ಷಿಣ ಜಿಲ್ಲಾ ಯೋಗ ಶಿಕ್ಷಣ ಸಂಯೋಜಕ, “ದಿಶಾ” ಯೋಗ ಕೇಂದ್ರದ ಮುಖ್ಯಸ್ಥರು ಹಾಗೂ ರಾಷ್ಟ್ರೀಯ ಸೇವಾಭಾರತಿ ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿಗಳಾದ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ರಿಕ್ರಿಯೇಷನ್ ಸೆಂಟರಿನ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಭಟ್, ಪ್ರಶಾಂತ್ ಡಿ.ಎಸ್., ವೀಣಾ ಕುಮಾರಿ ಹಾಗೂ ಪ್ರಸ್ತುತ ಅಧ್ಯಕ್ಷರಾದ ಈಶ್ವರ್ ನಾಯ್ಕ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಚಂದ್ರಶೇಖರ್, ಪ್ರಶಾಂತ್ ಭಟ್, ಪ್ರಶಾಂತ್ ಡಿ.ಎಸ್., ವೀಣಾ ಕುಮಾರಿ ಹಾಗೂ ವೃದ್ಧಿ ರೈ ಅವರು ಜಂಟಿಯಾಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.  ರಿಕ್ರಿಯೇಷನ್ ಸೆಂಟರಿನ ಉಪಾಧ್ಯಕ್ಷೆ ಸುಲತಾ ಸತೀಶ್ ಸ್ವಾಗತ ಭಾಷಣ ಮಾಡಿದರು.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಚಂದ್ರಶೇಖರ್ ಅವರು, ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗದ ಅಳವಡಿಕೆ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಬಳಿಕ ಯೋಗಾಭ್ಯಾಸದ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.

ಲೋಹಿತ್, ರೂಪೇಶ್, ರಂಗಸ್ವಾಮಿ, ಪಾವನ ಜಗದೀಶ್ ಹಾಗೂ ಪುರುಷೋತ್ತಮ ಅವರು ಮುಖ್ಯ ಅತಿಥಿಗಳನ್ನು ಹೂಗುಚ್ಛ ನೀಡಿ ಗೌರವಿಸಿದರು.

ಯೋಗ ಕಾರ್ಯಕ್ರಮದ ಬಳಿಕ ವಸತಿ ನಿಲಯದ ಸುತ್ತಮುತ್ತ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಶಾನ್ವಿ, ಆರ್ವಿ ಹಾಗೂ ಲಿಖಿತ ಪ್ರಾರ್ಥನಾ ಗೀತೆ ಹಾಡಿದರು. ರಮೇಶ್ ನೆಗಳಗುಳಿ ಧನ್ಯವಾದ ಸಮರ್ಪಿಸಿದರು. ವರುಣ್ ಕಾರ್ಯಕ್ರಮ ನಿರೂಪಿಸಿದರು.

ಇದೇ ವೇಳೆ, ಇತ್ತೀಚೆಗೆ ದೈವಾಧೀನರಾದ ಕ್ಯಾಂಪ್ಕೊ ಸಹೋದ್ಯೋಗಿ ತೀರ್ಥಕುಮಾರ್ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

The Recreation Centre of CAMPCO Chocolate Factory employees at Maril, Puttur, organized a Yoga Day program and cleanliness drive at the factory residential quarters. Yoga expert Chandrashekhar conducted a session on the benefits of yoga, and certificates were distributed to participants. A minute’s silence was also observed in memory of late CAMPCO employee Theerthakumar.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

6 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

13 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago