ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

May 10, 2025
7:05 PM

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್‌  ಕೊಡಿಯವರು ತಿಳಿಸಿದ್ದಾರೆ.

Advertisement

ಪ್ರಸ್ತುತ ಸಂದಿಗ್ಥ ಪರಿಸ್ಥಿತಿಯಲ್ಲಿ ದೇಶದ ಗಡಿ ರಕ್ಷಣೆಗಾಗಿ ಹೋರಾಡುತ್ತಿರುವ ಯೋಧರಿಗೆ ನೆರವಾಗಲು ಕ್ಯಾಂಪ್ಕೊ ರಾಷ್ಟ್ರೀಯ ರಕ್ಷಣಾನಿಧಿಗೆ  5.00 ಕೋಟಿ (ಐದುಕೋಟಿರೂಪಾಯಿ) ಕೊಡುಗೆ ನೀಡುವ ಮೂಲಕ ರಾಷ್ಟ್ರದ ಹಿತ ಕಾಪಾಡುವಲ್ಲಿ ತನ್ನ ಬದ್ಧತೆಯನ್ನು ತೋರಿಸಿದೆ.

“ಕ್ಯಾಂಪ್ಕೋ ಯಾವಾಗಲೂ ರಾಷ್ಟ್ರೀಯ ಹಿತ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಮುಂಚೂಣಿಯಲ್ಲಿರುವ ರೈತರ ಸಹಕಾರಿ ಸಂಸ್ಥೆಯಾಗಿದೆ. ಈ ಹಿಂದೆಯೂ, ನೈಸರ್ಗಿಕ ವಿಕೋಪಗಳು ಮತ್ತು ರಾಷ್ಟ್ರೀಯ ತುರ್ತುಪರಿಸ್ಥಿತಿಗಳ ಸಮಯದಲ್ಲಿ ನಾವು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ಆರ್ಥಿಕ ಬೆಂಬಲವನ್ನು ನೀಡಿದ್ದೇವೆ. ಈ ನಿರ್ಣಾಯಕ ಹಂತದಲ್ಲಿ, ನಮ್ಮ ಸಶಸ್ತ್ರ ಪಡೆಗಳು ಭಯೋತ್ಪಾದನೆ ಮತ್ತು ಬಾಹ್ಯಬೆದರಿಕೆಗಳ ವಿರುದ್ಧ ಧೈರ್ಯದಿಂದ ದೇಶವನ್ನು ರಕ್ಷಿಸುತ್ತಿರುವಾಗ,  ಅವರೊಂದಿಗೆ ನಿಲ್ಲುವುದು ನಮ್ಮ ನೈತಿಕ ಕರ್ತವ್ಯ. ಕ್ಯಾಂಪ್ಕೋ ಮತ್ತು ನಾವು ಪ್ರತಿನಿಧಿಸುವ ಇಡೀ ರೈತ ಸಮುದಾಯದ ಪರವಾಗಿ, ರಾಷ್ಟ್ರೀಯ ರಕ್ಷಣಾನಿಧಿಗೆ 5 ಕೋಟಿ ಕೊಡುಗೆ ನೀಡಲು ನಾವು ಹೆಮ್ಮೆಪಡುತ್ತೇವೆ.” ಎಂದು ಕ್ಯಾಂಪ್ಕೊಅಧ್ಯಕ್ಷರು ತಿಳಿಸಿದ್ದಾರೆ.

ಭಾರತ ಸರ್ಕಾರದಿಂದ  ನಿರ್ವಹಿಸಲ್ಪಡುವ ರಾಷ್ಟ್ರೀಯ ರಕ್ಷಣಾ ನಿಧಿಯು ಸಶಸ್ತ್ರಪಡೆಗಳು ಮತ್ತು ಪ್ಯಾರಾ-ಮಿಲಿಟರಿ ಸಿಬ್ಬಂದಿ ಹಾಗೂ ಅವರ ಅವಲಂಬಿತರ ಕಲ್ಯಾಣಕ್ಕಾಗಿ ಸಮರ್ಪಿತವಾಗಿದೆ. ಕ್ಯಾಂಪ್ಕೊ ದೇಣಿಗೆಯನ್ನು ಬ್ಯಾಂಕ್ ಮೂಲಕ ರಾಷ್ಟ್ರೀಯ ರಕ್ಷಣಾನಿ ಧಿಗೆ ನೀಡಿದೆ.

ಇಂತಹ ಕಠಿಣ ಸನ್ನಿವೇಶದಲ್ಲಿ ದೇಶದ ಸಮಸ್ತ ರೈತರು ಒಗ್ಗಟ್ಟನ್ನು ಪ್ರ ದರ್ಶಿಸಿ, ಕೇಂದ್ರ ಸರಕಾರಕ್ಕೆ ಬೆಂಬಲ ವ್ಯಕ್ತಪಡಿಸುವಂತೆ ಎಲ್ಲಾ ರೈತರಲ್ಲಿ ಕ್ಯಾಂಪ್ಕೊ ಅಧ್ಯಕ್ಷರು ವಿನಂತಿ ಮಾಡಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-07-2025 | 10 ದಿನಗಳವರೆಗೂ ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಳೆ | ಜುಲೈ 16 ರಿಂದ ರಾಜ್ಯದೆಲ್ಲೆಡೆ ಉತ್ತಮ ಮಳೆ |
July 14, 2025
1:02 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್
July 14, 2025
7:47 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ
July 14, 2025
7:40 AM
by: ದ ರೂರಲ್ ಮಿರರ್.ಕಾಂ
ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ
July 14, 2025
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group