ವಿಜಯಪುರ ಜಿಲ್ಲೆಯಲ್ಲಿ ಕೆನಡಾದ ವಿಟೆರಾದಿಂದ ₹250 ಕೋಟಿ ಹೂಡಿಕೆ | ಸಚಿವ ಎಂ. ಬಿ. ಪಾಟೀಲ

August 30, 2024
10:30 PM

ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.

Advertisement

ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror