ವಿಜಯಪುರ ಜಿಲ್ಲೆಯಲ್ಲಿ ಕೃಷಿ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೆನಡಾದ ಕೃಷಿ ಉತ್ಪನ್ನ ತಯಾರಿಕಾ ಪ್ರಮುಖ ಕಂಪನಿಯಾಗಿರುವ ವಿಟೆರಾ ₹250 ಕೋಟಿ ಮೊತ್ತದ ಬಂಡವಾಳ ಹೂಡಲಿದೆʼ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ವಿಟೆರಾ ಕಂಪನಿಯ ಪ್ರತಿನಿಧಿಗಳ ಜತೆ ಸಚಿವರು ಇಲ್ಲಿನ ಖನಿಜ ಭವನದಲ್ಲಿ ನಡೆಸಿದ ಸಭೆಯಲ್ಲಿ ಈ ಬಂಡವಾಳ ಹೂಡಿಕೆ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಕೃಷಿ ಸಮುದಾಯದ ಬಳಕೆಗೆ ಅತ್ಯಾಧುನಿಕ ಶೈತ್ಯಾಗಾರಗಳನ್ನು ನಿರ್ಮಿಸಿ ರೈತರು ಸುಗ್ಗಿಯ ನಂತರ ಎದುರಿಸುವ ನಷ್ಟ ತಗ್ಗಿಸಲು ಮತ್ತು ಕೃಷಿ ಉತ್ಪನ್ನಗಳ ಉತ್ಪಾದನೆ, ಪೂರೈಕೆ ಹಾಗೂ ಮಾರಾಟ ಪ್ರಕ್ರಿಯೆಯಲ್ಲಿ ದಕ್ಷತೆ ತರಲು ವಿಟೆರಾ ನೆರವಾಗಲಿದೆ. ವಿಟೆರಾ ಕಂಪನಿಯು ಸುಧಾರಿತ ಉತ್ಪಾದನಾ ತಂತ್ರಜ್ಞಾನ ಬಳಸಲಿದೆ. ರಾಜ್ಯದಲ್ಲಿ ಕೆನಡಾದ ಆಧುನಿಕ ಕೃಷಿ ತಂತ್ರಜ್ಞಾನ ಬಳಕೆ ಹಾಗೂ ಈ ಬಂಡವಾಳ ಹೂಡಿಕೆಯಿಂದ ಕೃಷಿ ಕ್ಷೇತ್ರದ ಉತ್ಪಾದನೆ ಹೆಚ್ಚಲಿದ್ದು, ಅದರಿಂದ ರಾಜ್ಯದ ಒಟ್ಟಾರೆ ಆರ್ಥಿಕತೆಗೂ ಉತ್ತೇಜನ ದೊರೆಯಲಿದೆʼ ಎಂದೂ ಸಚಿವರು ಹೇಳಿದ್ದಾರೆ.
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಹಾಗೂ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…
ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…