ಮುಂದಿನ ವರ್ಷದ ವೇಳೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಆರೈಕೆ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಜೆ.ಪಿ. ನಡ್ಡಾ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಅವರು, ಕ್ಯಾನ್ಸರ್ ತಪಾಸಣೆ ಮತ್ತು ಚಿಕಿತ್ಸೆಗೆ ಕೇಂದ್ರ ಸರ್ಕಾರ ದೊಡ್ಡ ಯೋಜನೆಯನ್ನು ರೂಪಿಸಿದೆ. ಒಂದು ಲಕ್ಷಕ್ಕೂ ಅಧಿಕ ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ವಿವಿಧ ರೂಪದ ಕ್ಯಾನ್ಸರ್ ಗೆ ತಪಾಸಣೆ ನಡೆಸಲಾಗುತ್ತಿದೆ. ಈ ಕೇಂದ್ರಗಳಲ್ಲಿ 29 ಕೋಟಿ 32 ಲಕ್ಷ ಬಾಯಿ ಕ್ಯಾನ್ಸರ್ ತಪಾಸಣೆ ನಡೆಸಲಾಗಿದ್ದು, ಈ ಪೈಕಿ 1 ಲಕ್ಷದ 63 ಸಾವಿರ ರೋಗ ಪತ್ತೆಯಾಗಿದೆ. 15 ಕೋಟಿ 60 ಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ ಮಾಡಲಾಗಿದ್ದು, ಈ ಪೈಕಿ 57 ಸಾವಿರ ರೋಗ ಪತ್ತೆಯಾಗಿದೆ ಎಂದರು. ದೇಶದಲ್ಲಿ ಸದ್ಯ 372 ಕ್ಯಾನ್ಸರ್ ಆರೈಕೆ ಕೇಂದ್ರಗಳಿದ್ದು, ಈ ವರ್ಷ ಇನ್ನೂ 200 ಇಂತಹ ಕೇಂದ್ರಗಳನ್ನು, ಮುಂದಿನ ವರ್ಷ ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಲಾಗುವುದು ಎಂದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel