ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

July 28, 2025
8:24 PM

ಕ್ಯಾನ್ಸರ್‌ ರೋಗಿಗಳ ಅನುಕೂಲ ಹಾಗೂ ಆರೈಕೆ ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ  ಕ್ಯಾನ್ಸರ್ ಡೇ ಕೇರ್ ಸೆಂಟರ್ (DCCC) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರೂ. ವರೆಗೆ ಅನುದಾನ ಮೀಸಲಿಡಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಕ್ಯಾನ್ಸರ್ ರೋಗಿಗಳ ಆರೈಕೆಯಲ್ಲಿ ನಗರ- ಗ್ರಾಮೀಣ ಅಸಮಾನತೆ ಕಡಿಮೆ ಮಾಡಿ, ಪರಿಣಾಮಕಾರಿ ಶುಶ್ರೋಷೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 2025-26ರ ಕೇಂದ್ರ ಬಜೆಟ್‌ನಲ್ಲಿ ಮುಂದಿನ ಮೂರು ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ  ಕ್ಯಾನ್ಸರ್ ಡೇ ಕೇರ್ ಸ್ಥಾಪಿಸುವ ಬಗ್ಗೆ ಘೋಷಣೆ ಮಾಡಿತ್ತು. ಈ ಉಪಕ್ರಮದ ಭಾಗವಾಗಿ ಪ್ರಥಮ ಹಂತದಲ್ಲಿ ದೇಶದಲ್ಲಿ 200 ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ಮುಂದಾಗಿದ್ದು, ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ದತ್ತಾಂಶ ಮತ್ತು ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳ ಆಧಾರದ ಮೇಲೆ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ 16 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಅಡಿಯಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪಿಸಲು ಜಿಲ್ಲೆಗೆ  ₹1.49 ಕೋಟಿ ವರೆಗೆ ಅನುದಾನವನ್ನು ಹಂಚಿಕೆ ಮಾಡಲಾಗಿದೆ  ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತಾವಿತ ಕೇಂದ್ರವು ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕ್ಯಾನ್ಸರ್ ರೋಗನಿರ್ಣಯ, ಕೀಮೋಥೆರಪಿ, ಆರೈಕೆ, ಕ್ಯಾನ್ಸರ್ ತಡೆಗಟ್ಟುವಿಕೆ -ಜಾಗೃತಿ ಕಾರ್ಯಕ್ರಮ ಮತ್ತು ಚಿಕಿತ್ಸಾ ಸೇವೆಗಳ ಜೊತೆಗೆ ಇತರ  ಬೆಂಬಲ ಸೇವೆಗಳು ಒದಗಿಸಲಿದೆ. ಜನರಿಗೆ ಗುಣಮಟ್ಟದ ಕ್ಯಾನ್ಸರ್ ಆರೈಕೆಯನ್ನು ಒದಗಿಸುವುದು ಮತ್ತು ತೃತೀಯ ಹಂತದ ಆರೈಕೆ ಕೇಂದ್ರಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸ್ವಾಗತಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದ್ದಾರೆ.

” ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಇದು ಒಂದು ಸಕಾಲಿಕ ನಿರ್ಧಾರವಾಗಿದ್ದು ಮಂಗಳೂರಿನಲ್ಲಿ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆಯು ಶ್ರೇಣಿ 2 ಮತ್ತು 3ನೇ ಹಂತದ ನಗರಗಳಲ್ಲಿ ನಗರಗಳಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಪ್ರಧಾನಮಂತ್ರಿ ಮೋದಿ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆ. ಈ ಡೇ ಕೇರ್ ಸೆಂಟರ್ ನಲ್ಲಿ ಕ್ಯಾನ್ಸರ್ ಪೀಡಿತರಿಗೆ ಆರೈಕೆಯನ್ನು ಸ್ಥಳೀಯವಾಗಿಯೇ ಒದಗಿಸುವುದರಿಂದ ರೋಗಿಗಳು ದೂರದ ನಗರಗಳಿಗೆ ಪ್ರಯಾಣಿಸುವ ತೊಂದರೆ ತಪ್ಪುತ್ತದೆ. ಇದು ಅವರ ಚಿಕಿತ್ಸಾ ವೆಚ್ಚ ಮತ್ತು ಸಮಯವನ್ನು ಉಳಿಸುವುದಲ್ಲದೆ, ಚೇತರಿಕೆಗೆ ಅಗತ್ಯವಾದ ಮಾನಸಿಕ ನೆಮ್ಮದಿಯನ್ನೂ ನೀಡುತ್ತದೆ. ಮುಂದಿನ ದಿನಗಳಲ್ಲಿ ಈ ಸೆಂಟರ್ ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ನೂರಾರು ಕ್ಯಾನ್ಸರ್ ರೋಗಿಗಳಿಗೆ ಆಶಾಕಿರಣವಾಗಲಿದೆ” ಎಂದು ಕ್ಯಾ. ಚೌಟ ಶ್ಲಾಘಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror