ವಿಶ್ವ ಕ್ಯಾನ್ಸರ್‌ ದಿನ | ಪ್ರಾರಂಭದಲ್ಲಿಯೇ ಕ್ಯಾನ್ಸರ್ ಚಿಕಿತ್ಸೆ ಪಡೆದರೆ ಗುಣಮುಖ

February 4, 2023
9:54 PM

ಹಲವು ವಿಧಗಳಲ್ಲಿ ಮನುಷ್ಯನನ್ನು ಬಾಧಿಸುವ ಕ್ಯಾನ್ಸರ್ ಕಾಯಿಲೆಯನ್ನು ಪ್ರಾರಂಭದಲ್ಲಿ ಪತ್ತೆಹಚ್ಚಿ, ಚಿಕಿತ್ಸೆ ಪಡೆದಲ್ಲಿ ಗುಣಮುಖರಾಗಿ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭಾಗ್ ಅವರು ಹೇಳಿದರು.

ಅವರು ಶನಿವಾರ ನಗರದ ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಎನ್‍ಸಿಡಿ ಕೋಶ ಮತ್ತು ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನೆಯವರು, ಸ್ನೇಹಿತರು, ಆ ಪರಿಸರದಲ್ಲಿರುವವರು ರೋಗಿಗೆ ಆತ್ಮವಿಶ್ವಾಸ ತುಂಬಬೇಕು, ಇದು ಕೂಡ ಕಾನ್ಸರ್ ಗುಣಪಡಿಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಈ ರೋಗಕ್ಕೆ ಬದಲಾಗುತ್ತಿರುವ ಜೀವನ ಶೈಲಿ ಅತ್ಯಂತ ಪ್ರಮುಖ ಕಾರಣವೆನ್ನಬಹುದು, ಅಸಾಂಕ್ರಮಿಕ ರೋಗವಾಗಿದೆ ಕ್ಯಾನ್ಸರ್, ಅಧಿಕ ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು ಮೊದಲಾದ ಹೃದಯದ ಕಾಯಿಲೆ ಮೊದಲಾದವುಗಳಿಂದ ಜನರು ಸಾವನ್ನಪ್ಪುವ ಪ್ರಮಾಣ ಹೆಚ್ಚಾಗಿದೆ ಎಂದವರು ಹೇಳಿದರು.

ಮಕ್ಕಳಿಗೆ ಎಳವೆಯಿಂದಲೇ ಉತ್ತಮ ಜೀವನದ ಪದ್ಧತಿಗಳನ್ನು ತಿಳಿಸಿಕೊಡಬೇಕು, ಊಟ ಬಲ್ಲವನಿಗೆ ರೋಗವಿಲ್ಲವೆನ್ನುವಂತೆ ಉತ್ತಮ ಆಹಾರ ಶೈಲಿಯನ್ನು ಅವರಿಗೆ ತಿಳಿಸಿಕೊಟ್ಟು, ಅವರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಬೇಕು, ರೋಗ ಲಕ್ಷಣಗಳನ್ನು ತಿಳಿದುಕೊಳ್ಳುವುದರಿಂದಲೂ ಕ್ಯಾನ್ಸರ್‍ನಿಂದ ಗೆಲ್ಲಲು ಸಾಧ್ಯ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ತಿಳಿಸಿದರು.

ವೆನ್ಲಾಕ್‍ನ ಫಾರ್ಮಸಿ ಅಧಿಕಾರಿ ನಿರ್ಮಲಾ ಜಿ.ಪಾಯಸ್ ಮಾತನಾಡಿ, ಮಹಿಳೆಯರು 40 ವರ್ಷದ ಬಳಿಕ ತಿಂಗಳಿಗೊಮ್ಮೆ ಸ್ವ ಪರೀಕ್ಷೆ ಮಾಡಿಕೊಳ್ಳಬೇಕು. ಬದಲಾವಣೆಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು ಎಂದರು.

ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಸುಧಾಕರ್, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷ  ಡಾ. ಸಿ.ಎ.ಶಾಂತರಾಮ ಶೆಟ್ಟಿ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ
August 23, 2026
7:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror