ಅಡಿಕೆ ಉಪ ಉತ್ಪನ್ನಗಳ ತಯಾರಿಕೆ ಬೆಂಬಲ ಘೊಷಿಸಿದ ಅಭ್ಯರ್ಥಿ |

April 23, 2024
1:54 PM
ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆಗೆ ಸಂಬಂಧಿಸಿದ ಉದ್ಯಮಗಳು, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕಿದೆ. ಈ ಬಗ್ಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಹೇಳಿದ್ದಾರೆ.

ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ  ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ  ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.

ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ,  ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ  ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.

ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.

ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror