ಅಡಿಕೆ ಬೆಳೆ ವಿಸ್ತರಣೆಯಾಗಿದೆ. ಆದರೆ ಭವಿಷ್ಯದಲ್ಲಿ ಅಡಿಕೆ ಧಾರಣೆ, ಅಡಿಕೆ ಮಾರುಕಟ್ಟೆ ಬಗ್ಗೆ ಚರ್ಚೆ ಆರಂಭವಾಗಿದೆ. ಇದಕ್ಕಾಗಿ ಅಡಿಕೆಯ ಪರ್ಯಾಯ ಉಪಯೋಗಗಳಿಗೆ ಆದ್ಯತೆ ಸಿಗಬೇಕು ಎನ್ನುವ ಬೇಡಿಕೆ ಇತ್ತು. ಇದೀಗ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡುವುದಾಗಿ ಹೇಳಿದ್ದಾರೆ.
ಚನ್ನಗಿರಿಯಲ್ಲಿ ಪ್ರಚಾರದ ವೇಳೆ ಮಾತನಾಡಿದ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಇದೀಗ ದಾವಣಗೆರೆ, ಚೆನ್ನಗಿರ ಸೇರಿದಂತೆ ಹಲವು ಕಡೆ ಅತಿ ಹೆಚ್ಚು ಅಡಿಕೆ ಬೆಳೆಯುವುದರಿಂದ ಅಡಿಕೆ ಬೆಳೆಗಾರರ ಹಿತರಕ್ಷಣೆ ಹಾಗೂ ಅಡಿಕೆ ಮೌಲ್ಯವರ್ಧನೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದರು.ಚನ್ನಗಿರಿ ತಾಲೂಕಿನಲ್ಲಿ ಅಡಿಕೆ ಉಪ ಉತ್ಪನ್ನಗಳ ತಯಾರಿಕಾ ಘಟಕಗಳಿಗೆ ಪ್ರೋತ್ಸಾಹ ನೀಡಿದರೆ ಉದ್ಯೋಗ ಸೃಜನೆಯ ಜೊತೆಗೆ ಅಡಿಕೆ ಬೆಳೆಗಾರರ ಹಿತ ಕಾಪಾಡಬಹುದು ಎಂದರು. ಅಡಿಕೆ ಉಪ ಉತ್ಪನ್ನ ತಯಾರಿಕಾ ಘಟಕಗಳು ಪ್ರಾರಂಭವಾದರೆ ಯುವಕರಿಗೆ ಉದ್ಯೋಗ ದೊರೆಯಲಿದೆ. ಅಲ್ಲದೆ ಪರೋಕ್ಷವಾಗಿ ಅನೇಕ ಕುಟುಂಬಗಳಿಗೆ ಸಹಾಯ ವಾಗಲಿದೆ ಎಂದರು.
ಇಂದು ಕೃಷಿ ವಲಯದಲ್ಲಿ ಆಗಬೇಕಾದ ಅಗತ್ಯ ಕೆಲಸಗಳಲ್ಲಿ ಇದೂ ಒಂದು. ಒಬ್ಬ ಅಭ್ಯರ್ಥಿಗೆ ಕನಿಷ್ಟ ತನ್ನ ಕ್ಷೇತ್ರದ ಕೃಷಿ ಹಾಗೂ ಅಭಿವೃದ್ಧಿ ಮಾಡಬೇಕಿರುವ ಕ್ಷೇತ್ರಗಳ ಅರಿವು ಇರಬೇಕಿದೆ. ಚುನಾವಣೆಯ ಸಂದರ್ಭ ಅಭ್ಯರ್ಥಿಗಳಿಗೂ ಕೃಷಿಕರು ಹಾಗೂ ಗ್ರಾಮೀಣ ಜನರು ಈ ಬಗ್ಗೆ ಹೆಚ್ಚು ಪ್ರಶ್ನೆ ಮಾಡಬೇಕಿದೆ.
ಅಡಿಕೆ ಬೆಳೆಯುವ ನಾಡು ವಿಸ್ತಾರವಾದಂತೆಯೇ, ಇದೀಗ ಅಡಿಕೆಯ ಪರ್ಯಾಯ ಬಳಕೆಯ ಕಡೆಗೂ ಆದ್ಯತೆ ನೀಡಬೇಕಿದೆ. ಅಡಿಕೆ ಬೆಳೆಯುವ ನಾಡಿನಲ್ಲಿ ಉದ್ಯಮಗಳ ಸ್ಥಾಪನೆ, ಅಡಿಕೆ ಬಳಕೆಯ ಉತ್ಪನ್ನಗಳ ತಯಾರಿಕೆ ಇತ್ಯಾದಿಗಳಿಗೆ ಆದ್ಯತೆ ನೀಡುವ ನೆಲೆಯಲ್ಲಿ ಕೆಲಸಗಳು ನಡೆಯಬೇಕಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…