Advertisement
ಸುದ್ದಿಗಳು

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

Share

ದೇಶದಲ್ಲಿ ತಾಯಂದಿರು ಮತ್ತು ಶಿಶು ಮರಣ ಪ್ರಮಾಣ, ಜಾಗತಿಕ ಮಟ್ಟಕ್ಕಿಂತಲೂ  ಇಳಿಕೆಯಾಗಿದೆ, ಆದರೆ ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದೆ  ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಲೋಕಸಭೆಯಲ್ಲಿ ತಿಳಿಸಿದ್ದಾರೆ. ……… ಮುಂದೆ ಓದಿ…….

ಪ್ರಶ್ನೋತ್ತರ ಅವಧಿಯಲ್ಲಿ ಅವರು, ಮಾತೆಯರು ಮತ್ತು ಮಕ್ಕಳ ಮರಣ ಪ್ರಮಾಣ ತಡೆಗಟ್ಟಲು ಸರ್ಕಾರ, ಬಹು ಆಯಾಮದ ಹಲವು ಯೋಜನೆಗಳ ಮೂಲಕ ಪ್ರಯತ್ನ ನಡೆಸುತ್ತಿದೆ. ಬುಡಕಟ್ಟು ಪ್ರದೇಶದಲ್ಲೂ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ. ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ತಪಾಸಣೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದ ಅತಿದೊಡ್ಡ ಆರೋಗ್ಯ ಕಾರ್ಯಕ್ರಮವಾಗಿದ್ದು, 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ದೇಶದಲ್ಲಿ, 61 ಕೋಟಿ ಜನರು ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಗೆ ನೋಂದಾಯಿಸಿಕೊಂಡಿದ್ದು, ಇದುವರೆಗೆ 8 ಕೋಟಿಗೂ ಅಧಿಕ ಮಂದಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆದಿದ್ದಾರೆ. ಬಡವರ ಆರೋಗ್ಯ ಯೋಜನೆಯಡಿ 1.19 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಯೋಜನೆಯು ಕಿಮೋ ಹಾಗೂ ಬೈಪಾಸ್, ಮಂಡಿ ಸೇರಿದಂತೆ ಸಾವಿರಕ್ಕೂ ಅಧಿಕ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.  ಆಯುಷ್ಮಾನ್ ಯೋಜನೆಯಡಿ, ಹಣ ಬಿಡುಗಡೆಗೆ ಕೇಂದ್ರ ಸರ್ಕಾರದಿಂದ ವಿಳಂಬವಾಗುತ್ತಿಲ್ಲ. ಡಿಜಿಟಲ್ ಮೂಲಕ ಆಸ್ಪತ್ರೆಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಸುಳ್ಳು ಪ್ರಕರಣಗಳ ತಡೆಗೆ ಸೂಕ್ತ ವ್ಯವಸ್ಥೆ ರೂಪಿಸಲಾಗಿದ್ದು, ಈ ಸಂಬಂಧ 1 ಸಾವಿರದ 114 ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 122 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಅವರು ಸದನಕ್ಕೆ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

17 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

17 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

18 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

18 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

19 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 days ago