ಶಿವಮೊಗ್ಗ ಜಿಲ್ಲೆ ಅರಳುಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗನ ಕಾಯಿಲೆ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪರಿಶೀಲನಾ ಸಭೆ ನಡೆಸಿದರು.
ಶಾಸಕ ಗೋಪಾಲಕೃಷ್ಣ ಬೇಳೂರು, ಜಿಲ್ಲೆಯಲ್ಲಿ ಸಾಮಾನ್ಯವಾಗಿ ಚಳಿಗಾಲದ ಸಂದರ್ಭದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹಲವು ಸಾವು ಪ್ರಕರಣಗಳು ಸಂಭವಿಸಿವೆ ಎಂದು ಸಚಿವರ ಗಮನಕ್ಕೆ ತಂದರು.
ಮಂಗನ ಕಾಯಿಲೆ ಗುಣಪಡಿಸಬಹುದಾಗಿದ್ದು, ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಮೂಲಕ ಸಾವು ಸಂಭವಿಸದಂತೆ ನೋಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂಗನ ಕಾಯಿಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೋಗ ನಿರೋಧಕ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇದಕ್ಕಾಗಿ ಹೈದರಾಬಾದಿನ ಸಂಸ್ಥೆಯೊಂದಕ್ಕೆ 10 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಮಂಗನ ಕಾಯಿಲೆಯಿಂದ ಸಾಕಷ್ಟು ಜನರು ಮೃತಪಟ್ಟಿದ್ದು, ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು, ಜನರನ್ನು ಮಂಗನಕಾಯಿಲೆ ಭಯದಿಂದ ಹೊರತರಬೇಕಾಗಿದೆ. ಇಲ್ಲಿ ಸೂಕ್ತ ಆಸ್ಪತ್ರೆ, ವೈದ್ಯರು ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕಾಗಿದೆ ಎಂದು ಅರಳುಗೋಡು ನಿವಾಸಿಗಳು ಇದೇ ವೇಳೆ ಒತ್ತಾಯಿಸಿದ್ದಾರೆ.
ಏನಿದು ಮಂಗನಕಾಯಿಲೆ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರು ಕಾಡಿನಲ್ಲಿ 1956ರಲ್ಲಿ ಈ ಕಾಯಿಲೆ ಪತ್ತೆ ಆಯಿತು. ಆದ್ದರಿಂದ, ಇದಕ್ಕೆ ಕ್ಯಾಸನೂರು ಕಾಯಿಲೆ ಎಂಬ ಹೆಸರು ಇದೆ. ಮಂಗನಿಂದ ಈ ಕಾಯಿಲೆ ಬರುವುದರಿಂದ ಮಂಗನಕಾಯಿಲೆ ಎಂದು ಕರೆಯಲಾಗುತ್ತದೆ. ಇದು ಕಾಡಿನಲ್ಲಿರುವ ಉಣ್ಣೆಗಳು ಕಚ್ಚುವುದರಿಂದ ಮಾತ್ರ ಬರುತ್ತದೆ. ಈ ಕಾಯಿಲೆಯು ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ. ಕಾಡಿನಲ್ಲಿ ಮಂಗಗಳು ಸಾಯುವುದೇ ಈ ಕಾಯಿಲೆಯ ಮುನ್ಸೂಚನೆಯಾಗಿದೆ.
ರೋಗದ ಲಕ್ಷಣಗಳು : ಸತತ ಎಂಟು-ಹತ್ತು ದಿನಗಳ ತನಕ ಬಿಡದೇ ಬರುವ ಜ್ವರ , ವಿಪರೀತ ತಲೆನೋವು, ಸೋಂಟ ನೋವು, ಕೈಕಾಲು ನೋವು, ನಿಶ್ಯಕ್ತಿ, ಕಣ್ಣು ಕೆಂಪಾಗುವುದು , ಜ್ವರ ಬಂದ 2 ವಾರದ ನಂತರ ಮೂಗು, ಬಾಯಿ, ಗುದದ್ವಾರದಿಂದ ರಕ್ತಸ್ರಾವವಾಗಬಹುದು , ಸನ್ನಿವಾತ/ಮೆದುಳಿನ ಹೊದಿಕೆಯ ಜ್ವರ ಲಕ್ಷಣಗಳು , ರೋಗದ ತೀವ್ರತೆಯು ರೋಗಿಯ ಪ್ರತಿರೋಧಕ ಶಕ್ತಿಯ ಮೇಲೆ ಅವಲಂಬಿತವಾಗಿರುತ್ತದೆ.
ಮುಂಜಾಗ್ರತಾ ಕ್ರಮಗಳು ಹೇಗೆ? : ವಾಸ ಸ್ಥಳದ ಸುತ್ತಮುತ್ತ ಅಥವಾ ಮನೆ ಸಮೀಪದ ಕಾಡಿನಲ್ಲಿ ಮಂಗ ಸತ್ತಿರುವುದು ತಿಳಿದೊಡನೆ ಸ್ಥಳೀಯ ಆರೋಗ್ಯಾಧಿಕಾರಿಗಳಿಗೆ ತಿಳಿಸುವುದು. ಮಂಗ ಸಾಯುತ್ತಿರುವ ಕಾಡಿನಲ್ಲಿ ಸಂಚಾರ ಮಾಡುವಾಗ ಮೈತುಂಬಾ ಬಟ್ಟೆ ಧರಿಸಿರಬೇಕು. ಡಿ.ಎಂ.ಪಿ ತೈಲವನ್ನು ಕೈ-ಕಾಲುಗಳಿಗೆ ಲೇಪಿಸಿಕೊಂಡು ಕಾಡಿಗೆ ಹೋಗಬೇಕು. ಕಾಡಿನಿಂದ ಬಂದ ನಂತರ ಬಿಸಿ ನೀರಿನಿಂದ ಸೋಪು ಹಚ್ಚಿ ಸ್ನಾನ ಮಾಡಬೇಕು. ಬಟ್ಟೆಗಳನ್ನು ಬಿಸಿ ನೀರಿನಿಂದ ಸೋಪು ಹಚ್ಚಿ ತೊಳೆಯಬೇಕು.
ಡಿಎಪಿ ರಸಗೊಬ್ಬರಗಳ ತ್ವರಿತ ಪೂರೈಕೆ ಹಾಗೂ ಲಭ್ಯತೆಯ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ ಸರ್ಕಾರವು…
ಬೆಳಗಾವಿ ಜಿಲ್ಲೆಯ ಗೋಕಾಕ, ಮೂಡಲಗಿ, ರಾಯಬಾಗ, ಚಿಕ್ಕೋಡಿ ಹುಕ್ಕೇರಿ ಹಾಗೂ ಬಾಗಲಕೋಟ ಜಿಲ್ಲೆಯ…
ಕೊಂಕಣ ರೈಲಿನ ವಿಲೀನಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಹಮತ ವ್ಯಕ್ತಪಡಿಸಿದ್ದಾರೆ ಎಂದು…
ಉತ್ತರ ಶ್ರೀಲಂಕಾ ಕರಾವಳಿಯ ಬಳಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ಕೇಂದ್ರೀಕೃತವಾಗಿದೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ…
ಸಮಾಜದಲ್ಲಿ ಯಾಕೆ ಇಷ್ಟೊಂದು ಸಿಟ್ಟು? ಅತ್ಯಂತ ಗಂಭೀರವಾದ ಪ್ರಶ್ನೆಗೆ ಬಂದಿರುವ ಉತ್ತರ ಪ್ರತಿಕ್ರಿಯೆಗಳಲ್ಲಿ…