Advertisement
ಅಪರಾಧ

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ವ್ಯಕ್ತಿ ವಿರುದ್ಧ ತೀವ್ರ ಆಕ್ರೋಶ | ವಿಡಿಯೋ ವೈರಲ್

Share

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ವೈರಲ್ ಆಗಿದೆ. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಒರೆಸಿಕೊಳ್ಳುವುದಲ್ಲದೆ ಬಳಿಕ ಚೇರ್ ಹಾಗೂ ಟೇಬಲ್ ಸ್ವಚ್ಛ ಮಾಡಿದ್ದ.

Advertisement
Advertisement

ಇದಾದ ಬಳಿಕ ಧ್ವಜವನ್ನು ಕೆಳಗೆ ಎಸೆದಿದ್ದ. ಈ ಘಟನೆ ಕೇರಳದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡುತ್ತಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ವ್ಯಕ್ತಿ ವಿರುದ್ಧ ತಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕೂಡಲೇ ಆತನನ್ನು ಬಂಧಿಸಿ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದರು. ಈಗ ಈ ಕುರಿತಂತೆ ತನಿಖೆ ನಡೆಸಿರುವ ಕೇರಳ ಪೊಲೀಸರು ಈ ಘಟನೆ ಎಲ್ಲಿ ನಡೆದಿದೆ ಎಂಬುದರ ಅಸಲಿ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ.

Advertisement

ಘಟನೆ ನಡೆದಿರುವುದು ಒಡಿಶಾದ ಪುರಿ ಜಿಲ್ಲೆಯ ಸಿಮಿಲಿ ಗ್ರಾಮ ಪಂಚಾಯತ್‌ ನಲ್ಲಿ ಎಂಬ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೆ ಈ ಕುರಿತು ಅಲ್ಲಿನ ಪೊಲೀಸರಿಗೆ ಮಾಹಿತಿಯನ್ನೂ ಸಹ ನೀಡಲಾಗಿದೆ ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ನೇಮಕ|

ಕ್ಯಾಂಪ್ಕೋದ ವ್ಯವಸ್ಥಾಪಕ ನಿರ್ದೇಶಕರಾಗಿ ಡಾ.ಬಿ.ವಿ.ಸತ್ಯನಾರಾಯಣ ಅವರನ್ನು ನೇಮಕಗೊಂಡಿದ್ದಾರೆ.

2 hours ago

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

16 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

18 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

23 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

1 day ago