ಲೋಕಾಯುಕ್ತಕ್ಕೆ ಸುಳ್ಳು ದೂರು ನೀಡುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಮತ್ತು ಕುಂದುಕೊರತೆ ಸ್ವೀಕಾರ ಸಭೆಯಲ್ಲಿ ಮಾತನಾಡಿದ ಅವರು, ಸುಳ್ಳು ಕೇಸು ದಾಖಲಿಸುವವರನ್ನು ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿಸಿದ್ದಾರೆ. ಭ್ರಷ್ಟಾಚಾರ ಕ್ಯಾನ್ಸರ್‌ಗಿಂತಲೂ ಅಪಾಯಕಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ನೂರಕ್ಕೂ ಅಧಿಕ ಸಾರ್ವಜನಿಕ ದೂರುಗಳ ವಿಚಾರಣೆ, ಕುಂದು ಕೊರತೆಗಳನ್ನು ಉಪ ಲೋಕಾಯುಕ್ತರು ಆಲಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement