ಚಿಕ್ಕಮಗಳೂರು ಜಿಲ್ಲೆಯಲ್ಲಿ 4 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಈ ಕಾಯಿಲೆ ಬಗ್ಗೆ ಅರಣ್ಯದಂಚಿನಲ್ಲಿ ಮತ್ತು ಕಾಫಿ ತೋಟಗಳಲ್ಲಿ ವಾಸವಾಗಿರುವ ಜನರು ಎಚ್ಚರಿಕೆವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Advertisement
ಜಿಲ್ಲೆಯಲ್ಲಿ ಕಂಡು ಬಂದಿರುವ 4 ಪ್ರಕರಣಗಳಲ್ಲಿ ಒಬ್ಬರು ಈಗಾಗಲೇ ಗುಣಮುಖರಾಗಿದ್ದು, ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ. ಹಾಗಾಗಿ ಕಾಡು ಅಥವಾ ತೋಟಗಳಿಗೆ ತೆರಳುವವರು ಮೈತುಂಬ ಬಟ್ಟೆ ತೊಡಬೇಕು, ಹೆಚ್ಚಿನ ಚಳಿ, ಜ್ವರ, ತಲೆನೋವು, ಶೀತ, ವಾಂತಿ ಉಂಟಾದರೆ ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement