ನಾಲ್ಕು ತಿಂಗಳ ಬೆಕ್ಕಿನ ಮರಿ ಕೊಂದ ಆರೋಪದ ಮೇಲೆ ಮಹಿಳೆಯೊಬ್ಬರ ವಿರುದ್ಧ ಚತುಃಶ್ರುಂಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೋಖಲೆನಗರ ನಿವಾಸಿ ಶಿಲ್ಪಾ ನೀಲಕಂಠ ಶಿರ್ಕೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆಕೆಯ ನೆರೆಯ ವ್ಯಕ್ತಿ ಪ್ರಶಾಂತ್ ದತ್ತಾತ್ರೇ ಗಾಥೆ ಎಂಬವರು ದೂರು ದಾಖಲಿಸಿದ್ದರು.
ಎಪ್ರಿಲ್ 2 ರಂದು ಈ ಘಟನೆ ನಡೆದಿದೆ. ಮಹಿಳೆ ಬೆಕ್ಕಿನ ಮರಿ ತಲೆಗೆ ಮೊಂಡಾದ ವಸ್ತುವಿನಿಂದ ಹೊಡೆದಿದ್ದಾರೆ. ಬೆಕ್ಕಿನ ಮರಿ ಆಗಾಗ್ಗೆ ತನ್ನ ಮನೆಗೆ ಬಂದು ಗಲಾಟೆ ಮಾಡುತ್ತಿತ್ತು, ಇದಕ್ಕಾಗಿ ಹೊಡೆದಿದ್ದೇನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಪೊಲೀಸರು ಮಹಿಳೆಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…