ಕಾವೇರಿ ವಿವಾದ | ಸಿಎಂ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ | ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸರ್ಕಾರ ನಿರ್ಧಾರ

July 15, 2024
10:47 AM

ತಮಿಳುನಾಡಿಗೆ ಜುಲೈ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನಿರ್ದೇಶನ ನೀಡಿತ್ತು. ಆದರೆ ಇದನ್ನು ಕರ್ನಾಟಕ ಸರ್ಕಾರ (Karnataka government) ಸ್ಪಷ್ಟವಾಗಿ ತಿರಸ್ಕರಿಸಿದೆ. ಇಂದು ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ (All Party Meeting) ಕರೆಯಲಾಗಿತ್ತು. ಈ ಸಭೆಯಲ್ಲಿ ಪ್ರತಿ ದಿನ 1 ಟಿಎಂಸಿ ನೀರು ಬಿಡೋದಕ್ಕೆ ಆಗೋದಿಲ್ಲ ಅಂತ ನಿರ್ಧಾರಕ್ಕೆ ಬರಲಾಗಿದೆ. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನೀರು ಬಿಡದಿರಲು ಸರ್ಕಾರ ನಿರ್ಧಾರ: ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡದಿರಲು ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ. ನಾವು ನೀರನ್ನು ಬಿಡೋದು ಬೇಡ ಎಂಬ ನಿರ್ಧಾರಕ್ಕೆ ಬಂದೆವು. ಇದಕ್ಕಾಗಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಮುಂದೆ ಸಿಡಬ್ಯೂಎಂಎ ಮುಂದೆ ಅಪೀಲು ಹೋಗ್ತೇವೆ ಅಂತ ಸಿಎಂ ಸ್ಪಷ್ಟಪಡಿಸಿದ್ದಾರೆ.

1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು: ಈ ಸಲ 30 ಇನ್ ಪ್ಲೋ ಕಡಿಮೆಯಾಗಿದೆ. ಎಲ್ಲಾ ಜಲಾಶಯಗಳು ಸೇರಿ 63 ಪರ್ಸೆಂಟ್ ನೀರು ಸಂಗ್ರಹವಾಗಿದೆ. ಎಲ್ಲರ ಅಭಿಪ್ರಾಯ ಏನು ಅಂದ್ರೆ 1 ಟಿಎಂಸಿ ನೀರು ಬಿಡಕ್ಕೆ ಆಗಲ್ಲ. ನಾವು ಅಪೀಲು ಹೋಗಲೇಬೇಕು ಅಂತ ನಿರ್ಧರಿಸಿದ್ದೇವೆ. ಹೀಗಾಗಿ 1 ಟಿಎಂಸಿ ಬದಲು 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರಿಸಿದ್ದೇವೆ. ಅದಕ್ಕಾಗಿ ಎಲ್ಲಾರ ಅಭಿಪ್ರಾಯ ತೆಗೆದುಕೊಂಡಿದ್ದೇವೆ ಅಂತ ಸಿಎಂ ಹೇಳಿದ್ದಾರೆ. ಸದ್ಯಕ್ಕೆ 8 ಸಾವಿರ ಕ್ಯೂಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬರದಿದ್ರೆ ಕಡಿಮೆ ಮಾಡೋಣ. ಸಿಡಬ್ಯೂಎಂಎ ಮುಂದೆ ಅಪೀಲು ಹಾಕೋಣ ಅಂತ ಸಿಎಂ ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror