#CauveryWater | ಕಾವೇರಿ ವಿವಾದ : ಎಚ್ಚೆತ್ತುಕೊಂಡ ಕರ್ನಾಟಕ ರಾಜ್ಯ ಸರ್ಕಾರ | ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಸರ್ಕಾರ

September 30, 2023
7:33 PM
ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಹಾಗೂ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಬೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ.

ಕಾವೇರಿ ನೀರು #Cauverywater ಉಳಿಸಿಕೊಳ್ಳುವ ಸಲುವಾಗಿ ವಾರದಲ್ಲಿ ಎರಡು ಬಂದ್‌, ಪ್ರತಿಭಟನೆ, ಹೋರಾಟ ನಡೆದಿದೆ.. ನಡೆಯುತ್ತಲೇ ಇದೆ. ರಾಜ್ಯಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆ ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ, ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ಅದರಲ್ಲಿ ಎರಡು ಬೇಡಿಕೆಗಳನ್ನು ಇಡಲಾಗಿದೆ.

Advertisement

ನೀರು ಬಿಡಲು ಸಾಧ್ಯವಿಲ್ಲ. ಹಾಗೂ ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಬೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ. ಇನ್ನು ನಿನ್ನೆ ನಡೆದ ಸಭೆಯಲ್ಲಿ ರಾಜ್ಯದ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಎಂದು ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ಕೂಡ ನೀಡಿದ್ದಾರೆ.

ಇದರ ಜೊತೆಗೆ ನ್ಯಾಯಮೂರ್ತಿಗಳು ಹಾಗೂ ವಕೀಲರು ‘ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ, ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ-ಅಂಶಗಳನ್ನ ಹೊರಗಡೆ ಹೇಳುವುದು ಸರಿಯಲ್ಲ ಎಂದು  ಸಲಹೆ ನೀಡಿದ್ದರು. ಇನ್ನು ನ್ಯಾಯಮೂರ್ತಿಗಳ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದರು.
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!
May 11, 2025
7:21 AM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು
May 11, 2025
7:15 AM
by: ನಾ.ಕಾರಂತ ಪೆರಾಜೆ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ
May 10, 2025
7:05 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group