#CauveryWater| ಕಾವೇರಿ ನದಿ ನೀರು ವಿವಾದ | ಕರ್ನಾಟಕದ ಮನವಿ ಆಲಿಸಿದ ಸುಪ್ರೀಂ ಕೋರ್ಟ್ | ತಮಿಳು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ |

August 25, 2023
5:04 PM
ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

ಕಾವೇರಿ ನದಿ ನೀರು ವಿಷಯದಲ್ಲಿ ಸದಾ ಒಂದಿಲ್ಲ ಒಂದು ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್  ಮೆಟ್ಟಿಲೇರುವ ತಮಿಳುನಾಡಿಗೆ ಇಂದು ಸರಿಯಾಗಿ ಮುಖಭಂಗವಾಗಿದೆ. ಪ್ರತಿ ದಿನ 24,000 ಕ್ಯೂಸೆಕ್‌ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ.

Advertisement
Advertisement
Advertisement
Advertisement

ತಮಿಳುನಾಡು ಪರ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ಶ್ಯಾಮ್ ದಿವಾನ್ ಅವರ ವಾದವನ್ನು ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆಲಿಸಿತು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಕರ್ನಾಟಕ ಬಿಡುಗಡೆ ಮಾಡಿದ ನೀರಿನ ಪ್ರಮಾಣದ ಬಗ್ಗೆ ವರದಿ ಕೇಳಿತು.

Advertisement

ಕೇಂದ್ರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಮುಂದಿನ ಹದಿನೈದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಲು ಪ್ರಾಧಿಕಾರವು ಸೋಮವಾರ ಸಭೆ ನಡೆಸಲಿದೆ ಎಂದು ಹೇಳಿದರು.

ನೀರು ಬಿಡಲು ನೀಡಿರುವ ನಿರ್ದೇಶನಗಳನ್ನು ಪಾಲಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು CWMA ತನ್ನ ವರದಿಯನ್ನು ಸಲ್ಲಿಸುವುದು ಸೂಕ್ತ ಎಂದು ಪೀಠವು ಹೇಳಿದೆ.

Advertisement

ನೀರು ಬಿಡಲು ಕಾವೇರಿ ನಿರ್ವಹಣಾ ಪ್ರಾಧಿಕಾರ ನೀಡಿದ್ದ ಗಡುವು ಇಂದಿಗೆ ಮುಕ್ತಾಯವಾಗುತ್ತಿದೆ. ಈ ನಡುವೆ ಆದೇಶ ಸರಿಯಾಗಿ ಪಾಲನೆಯಾಗಿಲ್ಲ. ಕಡಿಮೆ ಮಳೆಯ ವರ್ಷವಾಗಿದ್ದರೂ, ಪ್ರಸ್ತುತ ನಾವು ಅತ್ಯಂತ ಭೀಕರ ಬರವನ್ನು ಅನುಭವಿಸುತ್ತಿದ್ದೇವೆ. ನೀರು ಬಿಡದಿದ್ದರೆ ಭಾರಿ ಅನಾಹುತವಾಗಲಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ನೀರು ಬಿಡದಿದ್ದರೆ, ಅವರ ವಿರುದ್ಧ ನ್ಯಾಯಾಂಗ ನಿಂದನೆಯನ್ನು ಮುಂದುವರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿತು.

ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ, ನಾವು ತಜ್ಞರಲ್ಲ. ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಪ್ರಕರಣದ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಕೋರ್ಟ್‌ ಮುಂದೂಡಿತು. ಮಧ್ಯಂತರ ಅವಧಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆ ಕರೆಯುವಂತೆ ಸೂಚನೆ ನೀಡಿತು.

Advertisement

Source

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ
ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ
February 19, 2025
11:16 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ ಕಾಡ್ಗಿಚ್ಚು | 25 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
February 19, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror