#CuaveryWater | ಕರ್ನಾಟಕ ತನ್ನ ಕರ್ತವ್ಯ ಮುಗಿಸಿದರೂ ಪಟ್ಟು ಬಿಡದ ತಮಿಳುನಾಡು | ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ

September 12, 2023
2:04 PM
ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇರಲಿದ್ದಾರೆ.

ಕಾವೇರಿ ನೀರು Cuavery Water ವಿವಾದದ ಕಾವು ಮತ್ತಷ್ಟು ಏರುತ್ತಲೇ ಇದೆ. ರಾಜ್ಯದಲ್ಲಿ ಕೆಆರ್‌ಎಸ್‌ ಡ್ಯಾಂ KRS Dam ಈ ಬಾರಿ ಮಳೆ ಬಾರದ ಹಿನ್ನೆಲೆ ತುಂಬಲಿಲ್ಲ ಎಂದರು, ಮಾತು ಕೇಳುವ ಸ್ಥೀತಿಯಲ್ಲಿ ಇಲ್ಲ ತಮಿಳುನಾಡು. ತನ್ನದೇ ಹಠ ಸಾಧಿಸುತ್ತಿದೆ. ತೀವ್ರ ವಿರೋಧದ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ ಹಾಗೆ ತಮಿಳುನಾಡಿಗೆ ರಾಜ್ಯ ಸರ್ಕಾರ 75,000 ಕ್ಯೂಸೆಕ್ ನೀರು ಬಿಟ್ಟಿದ್ದು ಆಗಿದೆ. ಇಂದು ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ New Delhi ಪ್ರಾಧಿಕಾರ ಕರ್ನಾಟಕ ಹಾಗೂ ತಮಿಳುನಾಡಿನ ನೀರು ಹಂಚಿಕೆಯ ವಿವಾದದ ಸಂಬಂಧ  ಸಭೆ ನಡೆಸಲಿದೆ.

Advertisement

ಕಳೆದ ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 15 ದಿನಗಳ ಕಾಲ ನಿತ್ಯ 5,000 ಕ್ಯೂಸೆಕ್ ಅಂದರೆ ಒಟ್ಟು 75,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸೂಚನೆ ನೀಡಲಾಗಿತ್ತು. ಪ್ರಾಧಿಕಾರ ಸೂಚನೆಯಂತೆ ರಾಜ್ಯ ಸರ್ಕಾರ ರೈತರ ತೀವ್ರ ವಿರೋಧದ ನಡುವೆಯೂ ಹತ್ತೇ ದಿನಕ್ಕೆ ತಮಿಳುನಾಡಿಗೆ ಮಳೆ ನೀರು ಸೇರಿದಂತೆ ಕೆಆರ್‌ಎಸ್ ಡ್ಯಾಂನಿಂದ 75,000 ಕ್ಯೂಸೆಕ್ ನೀರು ಬಿಟ್ಟಿದೆ. ಸದ್ಯ ಕಾವೇರಿ ನೀರು ಹಂಚಿಕೆ ವಿವಾದದ ವಿಚಾರಣೆ ಸೆ.21ಕ್ಕೆ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ.

ಈ ನಡುವೆ ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇರಲಿದ್ದಾರೆ. ಆಗಸ್ಟ್ 29ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಆದ ನಿರ್ಣಯಗಳನ್ನು ಕರ್ನಾಟಕ ಸರ್ಕಾರ ಚಾಚು ತಪ್ಪದೇ ಪಾಲಿಸಿದೆ. ಹೀಗಿದ್ದರೂ ಸಹ ತಮಿಳುನಾಡು ನಮಗೆ ಈಗ ಬಿಟ್ಟಿರುವ ನೀರು ಸಾಲಲ್ಲ. ಇನ್ನೂ 10 ದಿನಗಳ ಕಾಲ 24,000 ಕ್ಯೂಸೆಕ್ ನೀರು ಹರಿಸುವಂತೆ ಬೇಡಿಕೆ ಇಡಲು ತಯಾರು ಮಾಡಿಕೊಂಡಿದೆ.

ಸದ್ಯದ ಪರಿಸ್ಥಿತಿಯಲ್ಲಿ ಈಗ ತಮಿಳುನಾಡಿಗೆ 75,000 ಕ್ಯೂಸೆಕ್ ನೀರು ಬಿಟ್ಟಿರುವುದೇ ದೊಡ್ಡ ವಿಚಾರ. ಈ ಮಧ್ಯೆ ತಮಿಳುನಾಡು ಇನ್ನೂ ಭಾರೀ ಪ್ರಮಾಣದ ನೀರು ಕೇಳಿರುವುದು ತಪ್ಪು. ಅದರಲ್ಲೂ ಪ್ರಾಧಿಕಾರವೂ ಸಹ ತಮಿಳುನಾಡಿನ ಮನವಿಯನ್ನು ನಿರಾಕರಿಸಬೇಕಾಗಿದೆ. ಈ ಬಗ್ಗೆ ಈಗಾಗಲೇ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಮನವರಿಕೆ ಮಾಡಿಕೊಟ್ಟಿದೆ. ಒಂದು ವೇಳೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಳ್ಳದೇ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದರೆ ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ಮಾಡಿ ನಾವು ನೀರು ಬಿಡಲು ಆಗಲ್ಲ ಎಂದು ಕಡ್ಡಿ ತುಂಡು ಮಾಡಿದ ಹಾಗೆ ಹೇಳಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಡ್ಯಾಂನಲ್ಲಿ ಇರೋದು ಕೇವಲ 98 ಅಡಿಗಳಷ್ಟೇ ನೀರು. ಟಿಎಂಸಿ ಲೆಕ್ಕಾಚಾರದಲ್ಲಿ ನೋಡುವುದಾದರೆ 21 ಟಿಎಂಸಿ ನೀರು ಅಷ್ಟೇ ಇರೋದು. ಈ ಪೈಕಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವ ಕಾರಣ ಬಳಕೆಗೆ ಇರೋದು ಕೇವಲ 16 ಟಿಎಂಸಿ ನೀರು ಮಾತ್ರ. ಮಳೆ ಬಾರದೇ ಇದ್ದರೆ ಈ ನೀರು ಕುಡಿಯೋಕು ಸಾಲಲ್ಲ.

ಒಟ್ಟಾರೆ ಇಂದಿನ ಕಾವೇರಿ ನೀರು ನಿರ್ವಹಣಾ ಸಮಿತಿಯಲ್ಲಿ ತಮಿಳುನಾಡು ಬೇಡಿಕೆಯನ್ನು ಸಮಿತಿ ತಿರಸ್ಕಾರ ಮಾಡಬೇಕಿದೆ. ಒಂದು ವೇಳೆ ಪ್ರಾಧಿಕಾರ ಮತ್ತೆ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದರೆ ಕರ್ನಾಟಕ ಸರ್ಕಾರ ನಾವು ನೀರು ಬಿಡೋದೆ ಇಲ್ಲ ಎಂದು ಹೇಳಬೇಕಾದ ಅನಿವಾರ್ಯ ಹಾಗೂ ಅಗತ್ಯತೆ ಇದೆ.

  • ಅಂತರ್ಜಾಲ ಮಾಹಿತಿ

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-04-2025 | ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ | ಎ.7 ರಿಂದ ಮಳೆಯ ಪ್ರಮಾಣ ಕಡಿಮೆ |
April 6, 2025
6:08 PM
by: ಸಾಯಿಶೇಖರ್ ಕರಿಕಳ
ಒಂದೆಡೆ ಮಳೆ-ಇನ್ನೊಂದೆಡೆ ಹೀಟ್‌ವೇವ್‌ | ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
April 6, 2025
11:00 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ
April 6, 2025
10:00 AM
by: ದ ರೂರಲ್ ಮಿರರ್.ಕಾಂ
ಮಾನವ-ಆನೆ ಸಂಘರ್ಷ ತಡೆಗೆ ಕ್ರಮ | 200 ಕೋ. ರೂ. ವೆಚ್ಚದ ರೈಲ್ವೆ ಬ್ಯಾರಿಕೇಡ್ ಕಾಮಗಾರಿ
April 6, 2025
9:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group