ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ಸುಪ್ರೀಂ ಕೋರ್ಟ್ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದು, #KRS ಜಲಾಶಯದ ನೀರಿನ ಮಟ್ಟ 96.90 ಅಡಿಗೆ ಕುಸಿದಿದೆ. ನಿನ್ನೆ ತಮಿಳುನಾಡಿಗೆ 2,673 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು, ಇಂದು 3,000 ಕ್ಯೂಸೆಕ್‌ಗೆ ಏರಿಕೆಯಾಗಿದೆ.
ತಮಿಳುನಾಡಿಗೆ ಕೆಆರ್‌ಎಸ್‌ನಿಂದ ಬಿಡುಗಡೆ ಮಾಡಲಾದ ನೀರಿನ ಪ್ರಮಾಣದಲ್ಲಿ 300 ಕ್ಯೂಸೆಕ್‌ನಷ್ಟು ಹೆಚ್ಚುವರಿ ನೀರು ಹರಿಸಲಾಗಿದೆ. ಸುಪ್ರೀಂ ಕೋರ್ಟ್ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ನಗರಗಳು ಸಂಪೂರ್ಣ ಸ್ಥಬ್ದವಾಗಲಿದೆ. ವರ್ತಕರ ಸಂಘ, ಹೋಟೆಲ್, ಪೆಟ್ರೋಲ್ ಬಂಕ್ ಮಾಲೀಕರು, ಆಟೋ ಚಾಲಕರು, ಖಾಸಗಿ ಬಸ್, ಲಾರಿ ಮಾಲೀಕರು ಸಂಘಗಳು ಬೆಂಬಲ ಸೂಚಿಸಿದ್ದು. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೂ ಬಂದ್ ಬೆಂಬಲಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.