#CauveryWater | ಕಾವೇರಿ ನೀರು ಬಿಡುಗಡೆ ವಿವಾದ | ಪಟ್ಟು ಬಿಡದ ತಮಿಳುನಾಡು | ಕಾವೇರಿ ಸಭೆಯಲ್ಲಿ ಕರ್ನಾಟಕದ ಪ್ರತಿ ಬಾಣ |

August 29, 2023
6:37 PM
ತಮಿಳುನಾಡು ಪ್ರತಿನಿಧಿಗಳು ನೀರನ್ನು ಬಿಡುಗಡೆ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇತ್ತ ಕರ್ನಾಟಕದ ಸರ್ಕಾರ ವಾಸ್ತವ ಪರಿಸ್ಥಿತಿಯನ್ನುತಿಳಿಸಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಇನ್ನೊಬ್ಬರು ಹಾಳಾದರೂ ತೊಂದರೆ ಇಲ್ಲ.. ನಾವು ಚೆನ್ನಾಗಿರಬೇಕು ಅನ್ನುವ ಜಾಯಮಾನ, ತಮಿಳುನಾಡು  ಸರ್ಕಾರದ್ದುt. ನಮ್ಮ ರಾಜ್ಯದ ರೈತರೇ ನೀರಿಲ್ಲದೆ ಪರಿತಪಿಸುವಂತಾಗಿದೆ. ಅಂತದ್ದರಲ್ಲಿ ತಮಿಳುನಾಡು ಸರ್ಕಾರ ಕಾವೇರಿ ನೀರು ಬಿಟ್ಟೇ ತೀರಬೇಕು ಎಂದು ಒತ್ತಾಯಿಸುತ್ತಲೇ ಇದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಭೆ ನಡೆಯುತ್ತಿದ್ದು, ತಮಿಳುನಾಡು ಪ್ರತಿನಿಧಿಗಳು ನೀರನ್ನು ಬಿಡುಗಡೆ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದಾರೆ. ಇತ್ತ ಕರ್ನಾಟಕದ ಸರ್ಕಾರ ವಾಸ್ತವ ಪರಿಸ್ಥಿತಿಯನ್ನುತಿಳಿಸಿದ್ದು, ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದೆ ಎನ್ನಲಾಗಿದೆ.

Advertisement

50 ಟಿಎಂಸಿ ನೀರಿಗೆ ಪಟ್ಟು: ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಅಧಿಕಾರ ಸಭೆಯಲ್ಲಿ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ತಮಿಳುನಾಡು ಪ್ರತಿನಿಧಿಗಳು, ಜೂನ್​ 1ರಿಂದ ಜೂನ್​ 1ರಿಂದ ಆಗಸ್ಟ್​ 27ರವರೆಗೆ 80.17 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಿತ್ತು. ಆದರೆ ಇದುವರೆಗೆ 30.17 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಮುಂದಿನ 10 ದಿನಗಳಲ್ಲಿ ಬಾಕಿ ಉಳಿಸಿಕೊಂಡಿರುವ 50.10 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕೆಂದು ಸಭೆಯಲ್ಲಿ ಒತ್ತಾಯಿಸಿದ್ದಾರೆ.

5000 ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ: ತಮಿಳುನಾಡು ಸರ್ಕಾರದ ಪರವಾಗಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂದೀಪ್ ಸಕ್ಸೇನಾ ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದಾರೆ. ಸೋಮವಾರ ನಡೆಸಿದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಬೇಕೆಂದು ತಿಳಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಪ್ರತಿನಿಧಿಗಳು CWRC ಸೂಚನೆಯ ವಿರುದ್ಧವಾಗಿ ಇಂದು ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದಲ್ಲಿ ಪ್ರಶ್ನಿಸಿತ್ತು. ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರಿನ ಬದಲು 3000 ಕ್ಯೂಸೆಕ್ ಬಿಡುತ್ತೇವೆ ಎಂದು ತಿಳಿಸಿತ್ತು ಎನ್ನಲಾಗಿದೆ.

ರಾಜ್ಯದಲ್ಲಿ ಮುಂಗಾರು ಮಳೆ ಶೇ. 47ರಷ್ಟು ಕೊರೆತೆಯಾಗಿದೆ. ಜಲಾಶಯಗಳು ಬರ್ತಿಯಾಗಿಲ್ಲ. ಒಂದು ವೇಳೆ ನೀರು ಬಿಟ್ಟರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಿಗೆ ಕುಡಿಯುವ ನೀರು ಕೊರತೆಯಾಗಲಿದೆ ಎಂದು ಕರ್ನಾಟಕ ಸಭೆಯಲ್ಲಿ ತಿಳಿಸಿದೆ. ತಮಿಳುನಾಡಿಗೆ ಹದಿನೈದು ದಿನಗಳ ಕಾಲ 5 ಸಾವಿರ ಘನ ಅಡಿ ನೀರು ಹರಿಸಲು ಕಾವೇರಿ ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವ ಬಗ್ಗೆ ಮಾತನಾಡಿದ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಎಂಬಿ ಪಾಟೀಲ್, ನಮ್ಮಲ್ಲಿ ನೀರಿಲ್ಲ, ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಜಾರಿಗೊಳಿಸುವುದು ಕಷ್ಟ, ಅಲ್ಲದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತದೆ ಎಂದು ತಿಳಿಸಿದ್ದಾರೆ. ಒಂದು ವೇಳೆ ಬಿಡಲೇ ಬೇಕೆಂದು ಸೂಚಿಸಿದರೆ ಕಾನೂನು ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

Advertisement

Source: Digital Media 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ
August 16, 2025
11:33 AM
by: ದಿವ್ಯ ಮಹೇಶ್
ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ
August 16, 2025
11:25 AM
by: The Rural Mirror ಸುದ್ದಿಜಾಲ
ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ
August 16, 2025
11:17 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ
August 15, 2025
2:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group