ತಮಿಳುನಾಡು #TamilNadu, ಕರ್ನಾಟಕ #Karnataka ಕಾವೇರಿ ನೀರು ಸಂಘರ್ಷದ ಮುಂದುವರೆದ ಭಾಗವಾಗಿ ರೈತರೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ರೈತರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ.
ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.
Source: News Agencies
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…