Advertisement
The Rural Mirror ಫಾಲೋಅಪ್

#Cuavery | ಮುಂದುವರೆದ ತಮಿಳುನಾಡು ಕಾವೇರಿ ನೀರು ಬಿಡುಗಡೆ ಸಂಘರ್ಷ | ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತ ಸಂಘ

Share

ತಮಿಳುನಾಡು #TamilNadu, ಕರ್ನಾಟಕ #Karnataka ಕಾವೇರಿ ನೀರು ಸಂಘರ್ಷದ ಮುಂದುವರೆದ ಭಾಗವಾಗಿ ರೈತರೇ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದಾರೆ. ರೈತರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಕೆಆರ್‌ಎಸ್‌ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತೆರಳಿದ್ದಾರೆ.

ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ.

Source: News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

4 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

20 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago