ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

May 10, 2025
7:42 PM
ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಹಲ್ಗಾಮ್ ಹತ್ಯಾಕಾಂಡದ ನಂತರ ಭಾರತ ನಡೆಸಿದ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಮೂರು ದಿನಗಳ ತೀವ್ರ ಮಿಲಿಟರಿ ಸಂಘರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಶನಿವಾರ ಸಂಜೆ ಹೇಳಿದ್ದಾರೆ.…..ಮುಂದೆ ಓದಿ….

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ. ಮಧ್ಯಾಹ್ನ ಪಾಕಿಸ್ತಾನದ ಡಿಜಿಎಂಒ ಅವರೇ  ಕರೆ ಮಾಡಿದರು. ನಂತರ ಚರ್ಚೆಗಳು ನಡೆದು ಒಮ್ಮತಕ್ಕೆ ಬರಲಾಯಿತು. ಭಾರತೀಯ ಸಮಯ 5:00 ರಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಎರಡೂ ಕಡೆಯವರು ಒಪ್ಪಿಕೊಂಡರು. ಎರಡೂ ಕಡೆಯ ಸಶಸ್ತ್ರ ಪಡೆಗಳಿಗೆ ತಕ್ಷಣವೇ ಕದನ ವಿರಾಮವನ್ನು ಜಾರಿಗೊಳಿಸಲು ಸೂಚಿಸಲಾಗಿದೆ ಎಂದು ಮಿಸ್ರಿ ದೃಢಪಡಿಸಿದರು. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ನಿರಂತರ ಸಂವಹನವನ್ನು ಖಚಿತಪಡಿಸಿಕೊಳ್ಳಲು ಡಿಜಿಎಂಒಗಳು ಮೇ 12 ರಂದು ಮಧ್ಯಾಹ್ನ ಮತ್ತೆ ಮಾತನಾಡಲಿದ್ದಾರೆ ಇಂದು ಈ ಒಪ್ಪಂದವನ್ನು ಜಾರಿಗೆ ತರಲು ಎರಡೂ ಕಡೆಯವರಿಗೆ ಸೂಚಿಸಲಾಗಿದೆ ಎಂದು ವಿಕ್ರಂ ಮಿಸ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

Advertisement

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಭಾರತವು ಬುಧವಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದ ನಂತರ ಈ ಘೋಷಣೆ ಬಂದಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಸಲಾಯಿತು, ಇದರಲ್ಲಿ ಹೆಚ್ಚಾಗಿ ಪ್ರವಾಸಿಗರು 26 ಜನರು ಸಾವನ್ನಪ್ಪಿದರು.

Advertisement

India and Pakistan have agreed to a full and immediate ceasefire after three days of intense military conflict, Foreign Secretary Vikram Misri confirmed on Saturday evening. The decision came after Pakistan reached out through military channels earlier in the day.

Advertisement

At a press briefing, Misri stated that Pakistan’s Director General of Military Operations (DGMO) contacted his Indian counterpart at 3:35 PM. Both sides agreed to halt all military action—on land, in the air, and at sea—beginning at 5 PM on Saturday.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror