ಮೂರು ದಿನಗಳ ತೀವ್ರ ಮಿಲಿಟರಿ ಸಂಘರ್ಷದ ನಂತರ ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಶನಿವಾರ ಸಂಜೆ ಹೇಳಿದ್ದಾರೆ.…..ಮುಂದೆ ಓದಿ….
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ. ಮಧ್ಯಾಹ್ನ ಪಾಕಿಸ್ತಾನದ ಡಿಜಿಎಂಒ ಅವರೇ ಕರೆ ಮಾಡಿದರು. ನಂತರ ಚರ್ಚೆಗಳು ನಡೆದು ಒಮ್ಮತಕ್ಕೆ ಬರಲಾಯಿತು. ಭಾರತೀಯ ಸಮಯ 5:00 ರಿಂದ ಭೂಮಿ, ವಾಯು ಮತ್ತು ಸಮುದ್ರದಲ್ಲಿ ಎಲ್ಲಾ ರೀತಿಯ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಎರಡೂ ಕಡೆಯವರು ಒಪ್ಪಿಕೊಂಡರು. ಎರಡೂ ಕಡೆಯ ಸಶಸ್ತ್ರ ಪಡೆಗಳಿಗೆ ತಕ್ಷಣವೇ ಕದನ ವಿರಾಮವನ್ನು ಜಾರಿಗೊಳಿಸಲು ಸೂಚಿಸಲಾಗಿದೆ ಎಂದು ಮಿಸ್ರಿ ದೃಢಪಡಿಸಿದರು. ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ನಿರಂತರ ಸಂವಹನವನ್ನು ಖಚಿತಪಡಿಸಿಕೊಳ್ಳಲು ಡಿಜಿಎಂಒಗಳು ಮೇ 12 ರಂದು ಮಧ್ಯಾಹ್ನ ಮತ್ತೆ ಮಾತನಾಡಲಿದ್ದಾರೆ ಇಂದು ಈ ಒಪ್ಪಂದವನ್ನು ಜಾರಿಗೆ ತರಲು ಎರಡೂ ಕಡೆಯವರಿಗೆ ಸೂಚಿಸಲಾಗಿದೆ ಎಂದು ವಿಕ್ರಂ ಮಿಸ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ, ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎರಡು ದೇಶಗಳು ಬುದ್ಧಿವಂತಿಕೆಯನ್ನು ಪ್ರದರ್ಶಿಸಿವೆ ಎಂದು ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಭಾರತವು ಬುಧವಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ದಾಳಿ ನಡೆಸಿ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದ ನಂತರ ಈ ಘೋಷಣೆ ಬಂದಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಈ ಕಾರ್ಯಾಚರಣೆ ನಡೆಸಲಾಯಿತು, ಇದರಲ್ಲಿ ಹೆಚ್ಚಾಗಿ ಪ್ರವಾಸಿಗರು 26 ಜನರು ಸಾವನ್ನಪ್ಪಿದರು.
India and Pakistan have agreed to a full and immediate ceasefire after three days of intense military conflict, Foreign Secretary Vikram Misri confirmed on Saturday evening. The decision came after Pakistan reached out through military channels earlier in the day.
At a press briefing, Misri stated that Pakistan’s Director General of Military Operations (DGMO) contacted his Indian counterpart at 3:35 PM. Both sides agreed to halt all military action—on land, in the air, and at sea—beginning at 5 PM on Saturday.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 953515649
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…