#GaneshFestival | ಹಲಾಲ್ ಮುಕ್ತ ಗಣೇಶೋತ್ಸವ ಆಚರಿಸಿ | ಹಿಂದೂ ಜನಜಾಗೃತಿ ಸಮಿತಿ ಕರೆ |

September 18, 2023
9:30 AM
ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ಎಂದು ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.

ಗಣೇಶ ಚತುರ್ಥಿಯ ನಿಮಿತ್ತ ಗಣೇಶೋತ್ಸವ ಆಚರಣೆಯ ಸಂದರ್ಭದಲ್ಲಿ ಹಲಾಲ್ ರಹಿತ ಉತ್ಪನ್ನಗಳನ್ನು ಉಪಯೋಗಿಸಿ ‘ಹಲಾಲ್` ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಭಾನುವಾರ ಬೆಂಗಳೂರಿನ  ವಿವಿಧೆಡೆಗಳಲ್ಲಿ ಗಣೇಶೋತ್ಸವ ಮಂಡಳಿಗಳು, ಅಂಗಡಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

Advertisement
Advertisement

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ  ಮೋಹನ್ ಗೌಡ, ಮಹಾಲಕ್ಷ್ಮಿ ಲೇಔಟ್ ಹಿಂದೂ ಮಹಾಗಣಪತಿ ಗಣೇಶೋತ್ಸವ ಮಂಡಳಿ ಅಧ್ಯಕ್ಷ  ಮಲ್ಲೇಶ್, ಸದಸ್ಯರಾದ  ಚೇತನ್,  ರವಿ ಅ,  ಮಂಜು, ಸಂದೀಪ್,
ನವೀನ್, ಯಶವತಪುರ ಶ್ರೀ ಮಹಾಗಣಪತಿ ಸೇವಾ ಸಮಿತಿ ಅಧ್ಯಕ್ಷ  ಮೋನಪ್ಪ ಗೌಡ, ಸದಸ್ಯ  ಗಿರೀಶ್ ಪೂಜಾರಿ, ಹಿಂದೂ ಯುವಕರ ಸಂಘ ಗಣೇಶೋತ್ಸವ ಮಂಡಳಿ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement

ರಾಜ್ಯದಲ್ಲಿ ಬಾಗಲಕೋಟೆ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳು, ಅದೇ ರೀತಿ ಗೋವಾ, ಮಹಾರಾಷ್ಟ್ರ, ದೆಹಲಿ, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ದೇಶಾದ್ಯಂತ ಹಲವು ಕಡೆಗಳಲ್ಲಿ ಮನವಿ ನೀಡಲಾಗಿದ್ದು, ಈ ಬಾರಿ ‘ಹಲಾಲ್ ಮುಕ್ತ ಗಣೇಶೋತ್ಸವ` ಆಚರಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಕರೆ ನೀಡಿದೆ.

ಅಭಿಯಾನದ ವೇಳೆ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ  ಮೋಹನ್ ಗೌಡ ಮಾತನಾಡಿ, ‘ಗಣೇಶೋತ್ಸವ ಆಚರಣೆಯ ಸಮಯದಲ್ಲಿ ಶ್ರೀ ಗಣೇಶನ ಪೂಜಾ ಸಾಮಗ್ರಿಗಳು ಮತ್ತು ಪ್ರಸಾದವು ’ಹಲಾಲ್ ಪ್ರಮಾಣೀಕೃತ’ ಆಗಿಲ್ಲವಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಮೂಲತಃ ಮಾಂಸಾಹಾರಕ್ಕೆ ಮಾತ್ರ ಸೀಮಿತವಾಗಿದ್ದ `ಹಲಾಲ್’ ಎಂಬ ಮೂಲ ಇಸ್ಲಾಮಿಕ್ ಪರಿಕಲ್ಪನೆಯು ಇಂದು ಆಹಾರ ಧಾನ್ಯಗಳು, ಸಿಹಿತಿಂಡಿಗಳು, ಸೌಂದರ್ಯವರ್ಧಕಗಳು, ಸಸ್ಯಾಹಾರಿ ಆಹಾರಗಳು, ಔಷಧಗಳು, ಪ್ರವಾಸೋದ್ಯಮ, ಆಸ್ಪತ್ರೆಗಳು, ಕಟ್ಟಡಗಳು, ರೆಸ್ಟೋರೆಂಟ್‌ಗಳು, ವೆಬ್‌ಸೈಟ್‌ಗಳು ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿಟ್ಟಿದೆ. ಹಾಗಾಗಿ ಈ ಬಾರಿ ಗಣೇಶೋತ್ಸವದಲ್ಲಿ ಗಣೇಶ ಭಕ್ತರಿಗೆ ‘ಹಲಾಲ್ ಪ್ರಮಾಣ ಪತ್ರ’ದ ಬಗ್ಗೆ ಮಾಹಿತಿ ನೀಡುವ ಕರಪತ್ರ ಹಂಚುವುದು, ಹಲಾಲ್ ಪ್ರಮಾಣಪತ್ರದ ಬಗ್ಗೆ ವಿರೋಧವನ್ನು ನೊಂದಾಯಿಸಲು ‘ಆನ್ ಲೈನ್ ಅರ್ಜಿ ಸಹಿ’ ವ್ಯವಸ್ಥೆ ಕಲ್ಪಿಸಿ, ಗಣೇಶ ಭಕ್ತರಿಗೆ ಸಹಿ ಮಾಡಲು ಜನಜಾಗೃತಿ ಮೂಡಿಸುವುದು ಈ ರೀತಿಯಾಗಿ ’ಹಲಾಲ್ ಮುಕ್ತ ಗಣೇಶೋತ್ಸವ’ ಆಚರಿಸಿರಿ` ಎಂದು ಕರೆ ನೀಡಿದರು.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |
May 13, 2024
8:32 PM
by: The Rural Mirror ಸುದ್ದಿಜಾಲ
Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror