ವಿಜಯದಶಮಿಯಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸದ ವಿಶೇಷತೆ |

October 13, 2024
11:24 AM

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಜಯದಶಮಿಯಂದು ಬೆಳಿಗ್ಗೆ 4 ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಚಿಕ್ಕ್ಕಮಕ್ಕಳಿಗೆ ಅಕ್ಷರಾಭ್ಯಾಸ ನಡೆಯುತ್ತದೆ. ಸಾವಿರಾರು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ.ಕರ್ನಾಟಕ ಮಾತ್ರವಲ್ಲ ಕೇರಳ ಸೇರಿದಂತೆ ದೂರದ ಊರುಗಳಿಂದಲೂ ಈ ಕ್ಷೇತ್ರದಲ್ಲಿ ಅಕ್ಷರಾಭ್ಯಾಸವನ್ನು ಮಾಡಿಸಲಾಗುತ್ತದೆ.

ಲಕ್ಷ್ಮೀ, ಸರಸ್ವತಿ ಹಾಗೂ ಪಾರ್ವತಿಯ ಐಕ್ಯ ಸ್ವರೂಪಿಣಿಯಾಗಿ ನೆಲೆನಿಂತ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿದ್ಯಾರಂಭ ಮಾಡಿಸಿದರೆ ಮಕ್ಕಳು ಭವಿಷ್ಯದಲ್ಲಿ ಉತ್ತಮವಾಗಿ ವಿದ್ಯೆ ಕಲಿಯುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ವಿಜಯದಶಮಿಯ ಶುಭ ಮುಹೂರ್ತದಲ್ಲಿ ಪುರೋಹಿತರ ಮಾರ್ಗದರ್ಶನದ ಮೇರೆಗೆ ಪಾಲಕರು ತಮ್ಮ ಮಕ್ಕಳ ಕೈ ಹಿಡಿದು ಅಕ್ಕಿತುಂಬಿದ ಬಟ್ಟಲಿನಲ್ಲಿ ಓಂಕಾರದಿಂದ ಮೊದಲ್ಗೊಂಡು ದೇವಿಯ ಸ್ತೋತ್ರ ಹಾಗೂ ವರ್ಣ ಮಾಲೆಗ ಮತ್ತು ಸಂಖ್ಯೆಗಳನ್ನು  ಬರೆಯಿಸಿ ಅಕ್ಷರಾಭ್ಯಾಸಕ್ಕೆ ಮುನ್ನುಡಿ ಬರೆದರು.

ನಂತರ ಪೋಷಕರು ತಮ್ಮ ಮಕ್ಕಳ ನಾಲಗೆಯ ಮೇಲೆ ಉಂಗುರದಿಂದ ಓಂಕಾರವನ್ನು ಬರೆದು ಶ್ರೀದೇವಿಯ ಆಶೀರ್ವಾದವನ್ನು ಬೇಡಿದರು.  ಬಳಿಕ ದೇವಸ್ಥಾನದ ಮುಂಬಾಗದಲ್ಲಿರುವ ಧ್ವಜಕಟ್ಟೆಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ವಿದ್ಯಾರಂಭದ ವಿಧಿವಿಧಾನಗಳು ಸಾಂಗವಾಗಿ ಮುಗಿದವು.  ರಾಜ್ಯ ಹಾಗೂ ನೆರೆಯ ಕೇರಳ ಹಾಗೂ ತಮಿಳುನಾಡು ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು ಪುನೀತರಾದರು.

On Vijayadashami, children at Kollur Sri Mookambika Temple in Bynduru Taluk of Udupi District participate in the ritual of Aksharabhyas. Thousands of people, including those from distant places like Kerala, attend this program. This event promotes literacy not only within Karnataka but also across borders.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌
August 29, 2026
6:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?
August 29, 2026
6:37 PM
by: ಸಾಯಿಶೇಖರ್ ಕರಿಕಳ
ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror