ನಮ್ಮ ಹೆಮ್ಮೆಯ ಇಸ್ರೋ #ISRO ವಿಜ್ಞಾನಿಗಳ ತಂಡ ಭಾರತದ ಕನಸನ್ನು ನನಸು ಮಾಡಿದ್ದಾರೆ. ಚಂದ್ರಯಾನ -3 #Chandrayaan-3 ರ ಯಶಸ್ವಿ ಉಡಾವಣೆ ಇಡೀ ವಿಶ್ವವನ್ನೆ ಭಾರತದ ಕಡೆ ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ. ಚಂದ್ರಯಾನ-3 ಮೂಲಕ ಭಾರತ ಮಹತ್ತರ ಸಾಧನೆಯನ್ನು ಮಾಡಿದೆ. ಇಸ್ರೋ ಸಂಸ್ಥೆಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ವಿಜ್ಞಾನಿಗಳ ಈ ಸಾಧನೆ ಎಲ್ಲರಿಗೂ ಪ್ರೇರಣೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ Narendra Modi ಅವರು ವಿಜ್ಞಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದ್ದನ್ನು ಗುರುತಿಸುವುದಕ್ಕಾಗಿ ಆಗಸ್ಟ್ 23 ನ್ನು ಕೇಂದ್ರ ಸಚಿವ ಸಂಪುಟ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ #NationalSpaceDay ಎಂದು ಘೋಷಿಸಿದೆ.
ಚಂದ್ರಯಾನ-3 ಮಿಷನ್‌ಗಾಗಿ ಕೆಲಸ ಮಾಡಿದ ಇಸ್ರೋ ವಿಜ್ಞಾನಿಗಳ ಐತಿಹಾಸಿಕ ಯಶಸ್ಸನ್ನು ಸಚಿವ ಸಂಪುಟ ಶ್ಲಾಘಿಸುತ್ತದೆ. ಇದು ಜಾಗತಿಕ ವೇದಿಕೆಯಲ್ಲಿ ನಮ್ಮ ಶಕ್ತಿಯ ಸಂಕೇತವಾಗಿದೆ. ಸಚಿವ ಸಂಪುಟವು ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸುವ ಕ್ರಮವನ್ನು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಕ್ಯಾಬಿನೆಟ್ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಆಗಸ್ಟ್ 26 ರಂದು ಬೆಂಗಳೂರಿನ ಇಸ್ರೋ ಕಮಾಂಡ್ ಸೆಂಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಘೋಷಣೆ ಮಾಡಿದ್ದರು.
ಇಂದಿನ ಯುಗದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ದೇಶವು ಇತಿಹಾಸ ಸೃಷ್ಟಿಸುತ್ತದೆ. ನಮ್ಮ ಯುವ ಪೀಳಿಗೆಯನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಉತ್ತೇಜಿಸಲು, ನಾವು ನಮ್ಮ ಚಂದ್ರಯಾನ-3 ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸಿದ ದಿನವಾದ ಆಗಸ್ಟ್ 23ನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸುತ್ತದೆ ಎಂದಿದ್ದಾರೆ ಠಾಕೂರ್.
ಭಾರತದ ಮೂರನೇ ಚಂದ್ರಯಾನ ಚಂದ್ರಯಾನ-3, 40 ದಿನಗಳ ಪ್ರಯಾಣದ ನಂತರ ಚಂದ್ರನ ಮೇಲ್ಮೈಯನ್ನು ತಲುಪಿತು. ಚಂದ್ರಯಾನ-3 ಮಿಷನ್ನ ಐತಿಹಾಸಿಕ ಯಶಸ್ಸನ್ನು ಆಚರಿಸಲು ಕೇಂದ್ರ ಸಚಿವ ಸಂಪುಟ ದೇಶದ ಜನರೊಂದಿಗೆ ಸೇರುತ್ತದೆ. ನಮ್ಮ ವಿಜ್ಞಾನಿಗಳ ಸ್ಮರಣೀಯ ಸಾಧನೆಯನ್ನು ಸಚಿವ ಸಂಪುಟವೂ ಶ್ಲಾಘಿಸುತ್ತದೆ. ಇದು ನಮ್ಮ ಬಾಹ್ಯಾಕಾಶ ಏಜೆನ್ಸಿಯ ಗೆಲುವು ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿ ಭಾರತದ ಪ್ರಗತಿ ಮತ್ತು ಅಭಿವೃದ್ಧಿಯ ಸಂಕೇತವಾಗಿದೆ. ಚಂದ್ರನ ಮೇಲಿರುವ ಎರಡು ಪಾಯಿಂಟ್ಗಳಿಗೆ ತಿರಂಗಾ ಮತ್ತು ಶಿವಶಕ್ತಿ ಎಂದು ಹೆಸರಿಸಿರುವ ಕುರಿತು ಮಾತನಾಡಿದ ಸಚಿವರು, ಈ ಹೆಸರುಗಳು ಆಧುನಿಕತೆಯ ಚೈತನ್ಯವನ್ನು ಅಳವಡಿಸಿಕೊಂಡು ನಮ್ಮ ಗತಕಾಲದ ಸಾರವನ್ನು ಬಿಂಬಿಸುತ್ತದೆ ಎಂದು ಹೇಳಿದರು.
Source: Digital Media
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…