ರಾಜ್ಯದಲ್ಲಿ ಜನಗಣತಿ ಪ್ರಕ್ರಿಯೆಯ ಭಾಗವಾಗಿ ಮನೆಗಳ ಗಣತಿ ಕಾರ್ಯವು ಏಪ್ರಿಲ್ 16ರಿಂದ ಮೇ 15ರವರೆಗೆ 30 ದಿನಗಳ ಕಾಲ ನಡೆಯಲಿದೆ. ಇದರ ಪೂರ್ವಭಾವಿಯಾಗಿ, ಸಾರ್ವಜನಿಕರು ತಮ್ಮ ಮಾಹಿತಿಯನ್ನು ಸ್ವತಃ ನಮೂದಿಸಲು “ಸ್ವಯಂ-ಎಣಿಕೆ” ವ್ಯವಸ್ಥೆ ಅನ್ನು ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಜಾರಿಗೊಳಿಸಲಾಗಿದೆ. ಸ್ವಯಂ-ಎಣಿಕೆ ಆಯ್ಕೆಯನ್ನು ಬಳಸಿಕೊಂಡು ಜನಗಣತಿಗೆ ಸಹಕರಿಸಬೇಕು ಎಂದು ದ ಕ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಮನೆ ಪಟ್ಟಿ ಮತ್ತು ಮನೆ ಗಣತಿ (HLO) ಸಮಯದಲ್ಲಿ ವಸತಿ ಸ್ಥಿತಿ, ಲಭ್ಯವಿರುವ ಸೌಲಭ್ಯಗಳು ಹಾಗೂ ಕುಟುಂಬದ ಆಸ್ತಿಗಳ ಕುರಿತ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.
ಜನಗಣತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಸರ್ಕಾರವು ಆನ್‌ಲೈನ್ ಪೋರ್ಟಲ್‌ನ್ನು ಪರಿಚಯಿಸಿದ್ದು, ಸಾರ್ವಜನಿಕರು ಸುಲಭವಾಗಿ ತಮ್ಮ ಮಾಹಿತಿಯನ್ನು ದಾಖಲಿಸಬಹುದಾಗಿದೆ.
ಸ್ವಯಂ-ಎಣಿಕೆ ಮಾಡುವ ವಿಧಾನ :
ಮನೆಗಳಿಗೆ ಭೇಟಿ : ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆಗಳಿಗೆ ಭೇಟಿ ನೀಡಿ, ನೀಡಿದ ಮಾಹಿತಿಯನ್ನು ಪರಿಶೀಲಿಸುತ್ತಾರೆ.
SE ID ಇದ್ದಲ್ಲಿ ಡೇಟಾವನ್ನು ತಕ್ಷಣ ಮೌಲ್ಯೀಕರಿಸಲಾಗುತ್ತದೆ. ಇಲ್ಲದಿದ್ದರೆ ಸ್ಥಳದಲ್ಲೇ ಮಾಹಿತಿ ಸಂಗ್ರಹಿಸಲಾಗುತ್ತದೆ.
ಹೆಚ್ಚಿನ ಮಾಹಿತಿ : ತಾಲ್ಲೂಕು ಕಚೇರಿ, ನಗರ ಸ್ಥಳೀಯ ಸಂಸ್ಥೆ, ಗ್ರಾಮ ಪಂಚಾಯತ್ ಅಥವಾ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
The Census 2026 process has begun in Karnataka with a self-enumeration option available from April 1 to April 15. House listing and verification will take place from April 16 to May 15. Authorities have urged the public to actively participate using the online system.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…