ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ | ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ

March 25, 2025
8:05 AM
ರಾಷ್ಟ್ರಹಿತದ ಚಿಂತನೆಗಳನ್ನು ಜಾಗೃತಗೊಳಿಸುವ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಿನ್ನಲೆ ವರ್ಷವಿಡೀ ಹಲವು ರಚನಾತ್ಮಕ ಕಾರ್ಯಕ್ರಮಗಳ ಆಯೋಜನೆಗೆ ಸಿದ್ದತೆ ನಡೆದಿದ್ದು, ಬರುವ ವಿಜಯದಶಮಿಯಂದು ಸಂಘದ ಸಂಸ್ಥಾಪನಾ ದಿನಾಚರಣೆ ನಡೆಯಲಿದೆ ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದರು.………ಮುಂದೆ ಓದಿ……..

Advertisement

ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಪ್ರತಿನಿಧಿ ಸಭಾ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು, ಹೊಸ ಕಾರ್ಯಕರ್ತರ ಸೇರ್ಪಡೆಗೆ ಸಂಪರ್ಕ ಅಭಿಯಾನ, ಸಾಮಾಜಿಕ ಸೇವಾ ಕಾರ್ಯಗಳ ಹೆಚ್ಚಳಕ್ಕೆ ವಿವಿಧ ಕಾರ್ಯಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.  ಸಾಮಾಜಿಕ-ಸದ್ಭಾವದ ಆಲೋಚನೆಗಳ ಜೊತೆಗೆ ಸಾಮಾಜಿಕ ಸಾಮರಸ್ಯದ ಚಿಂತನೆಗಳನ್ನೂ ಸಂಘವು ಗೌರವಿಸುತ್ತದೆ. ಶತಮಾನೋತ್ಸವ ವರ್ಷದಲ್ಲಿ ದೇಶದ ಕೋಟ್ಯಂತರ ಮನೆ ಮನೆಗಳಿಗೆ ಔಟ್‌ರಿಚ್‌ ಕಾರ್ಯಕ್ರಮ ನಡೆಯಲಿದೆ. ಬೆಂಗಳೂರಿನಲ್ಲಿ 4 ವರ್ಷಗಳ ಬಳಿಕ ನಡೆದ ಅಖಿಲ ಭಾರತ ಪ್ರತಿನಿಧಿ ಸಭಾ ಹಲವು ಮುಖ್ಯ ವಿಷಯಗಳ ಬಗ್ಗೆ ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದರು. ರಾಷ್ಟ್ರ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 1 ಲಕ್ಷ ಸ್ಥಳಗಳಲ್ಲಿ ವಿಜಯದಶಮಿ ಉತ್ಸವ, ಪಂಚ ಪರಿವರ್ತನಾ ಕಾರ್ಯಕ್ರಮ, ಹಿಂದು ಸಮ್ಮೇಳನಗಳನ್ನು ಗ್ರಾಮ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಆಯೋಜನೆ, ನಗರಗಳಲ್ಲಿ ಸಾಮಾಜಿಕ ಸದ್ಭಾವನಾ ಬೈಠಕ್‌ಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ವಿಚಾರಧಾರೆ, ಹಿಂದುತ್ವ ಸಿದ್ದಾಂತ, ಒಂದು ರಾಷ್ಟ್ರ-ಒಂದು ಸಂಸ್ಕೃತಿ ಬಗ್ಗೆ ಚರ್ಚೆ ಹಾಗೂ ವಿಮರ್ಶೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದರು. ರಾಷ್ಟ್ರಹಿತದ ಚಿಂತನೆಗಳನ್ನು ಜಾಗೃತಗೊಳಿಸುವ ಸಂಕಲ್ಪದೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತಾರಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜನೆ ಮಾಡಿ ಹೊಸ ತಲೆಮಾರಿನ ಮಕ್ಕಳನ್ನು ದೇಶಸೇವೆಗೆ ಅಣಿಗೊಳಿಸಲು ಮಹತ್ವದ ಸಂಕಲ್ಪ ಕೈಗೊಳ್ಳಲಾಗಿದ ಎಂದು ತಿಳಿಸಿದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 27-03-2025 | ಕೆಲವು ಕಡೆ ಗುಡುಗು ಸಹಿತ ಮಳೆ | ಎ.3 ರಿಂದ ಮತ್ತೆ ಮಳೆ ಸಾಧ್ಯತೆ |
March 27, 2025
2:20 PM
by: ಸಾಯಿಶೇಖರ್ ಕರಿಕಳ
ಗೇರು ಹಣ್ಣು ಸೇವನೆಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆ
March 27, 2025
10:57 AM
by: ದ ರೂರಲ್ ಮಿರರ್.ಕಾಂ
ಆಹಾರ ಕಲಬೆರಕೆ ವಿರುದ್ಧ ಕಠಿಣ ಕ್ರಮ | ಸಚಿವ ಪ್ರಲ್ಹಾದ್  ಜೋಷಿ ಸ್ಪಷ್ಟನೆ
March 27, 2025
10:43 AM
by: The Rural Mirror ಸುದ್ದಿಜಾಲ
ಜಲ ಸಂರಕ್ಷಿತ ಗ್ರಾಮಗಳ ರೂಪಿಸಲು ಜಿಲ್ಲಾ ಮಟ್ಟದಲ್ಲಿ ನೀಲನಕ್ಷೆ ತಯಾರಿಸುವಂತೆ ಸೂಚನೆ
March 27, 2025
8:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group