ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

June 20, 2024
11:35 AM

ಎನ್‌ಡಿಎ ಸರ್ಕಾರ(NDA Govt) ರೈತರ(Farmers) ಹಿತ ಕಾಪಾಡಲು ಮೊದಲ ಹೆಜ್ಜೆಯನ್ನಿಟ್ಟಿದೆ. ರೈತರಿಗೆ ಕೇಂದ್ರ ಸರ್ಕಾರ(Central Govt) ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭತ್ತ(Paddy), ರಾಗಿ(Ragi), ತೊಗರಿ(Dal) ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆಯನ್ನು(Minimum Support Price) ಹೆಚ್ಚಿಸಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.50 ರಷ್ಟು ಎಂಎಸ್‌ಪಿ ಹೆಚ್ಚಿಸಿದೆ.

Advertisement
Advertisement
Advertisement

ಭತ್ತದ ಮೇಲಿನ ಎಂಎಸ್‌ಪಿಯನ್ನು 143 ರೂಪಾಯಿ ಹೆಚ್ಚಿಸಿದ್ದು, ಭತ್ತದ ಕನಿಷ್ಠ ಬೆಲೆ ಈಗ 2,300 ರೂಪಾಯಿ ಆಗಿದೆ. ಅದೇ ರೀತಿ ರಾಗಿಗೆ 268 ರೂ., ಗೋಧಿ 150 ರೂ., ಮೆಕ್ಕೆ ಜೋಳ 128 ರೂ., ಜೋಳ 210 ರೂ., ಸಜ್ಜೆ 150 ರೂ., ತೊಗರಿ 400 ರೂ., ಹೆಸರುಬೇಳೆ 803 ರೂ., ಉದ್ದಿನ ಬೇಳೆ 350 ರೂ., ಕಡಲೆಕಾಯಿ 527 ರೂ., ಸೂರ್ಯಕಾಂತಿ 360 ರೂ., ಸೋಯಾಬೀನ್ 300 ರೂ., ಹತ್ತಿ 400 ರೂ., ಎಳ್ಳಿ 632 ರೂ., ಹುಚ್ಚೆಳ್ಳಿ 983 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. ಇದರಿಂದ 2 ಲಕ್ಷ ರೈತರಿಗೆ ಲಾಭವಾಗಲಿದೆ.

Advertisement

ಸರ್ಕಾರಕ್ಕೆ 35,000 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಸರ್ಕಾರಿ ಗೋದಾಮಿನಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಇರುವಾಗಲೇ ಭತ್ತಕ್ಕೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 117 ರೂ. ಹೆಚ್ಚಳ ಮಾಡಲಾಗಿದೆ. ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಕಟಿಸಿದ ಮೊದಲ ನಿರ್ಧಾರ ಇದಾಗಿದೆ. ಬೆಂಬಲ ಬೆಲೆ ಹೆಚ್ಚಳ ಮಾಡಿರುವುದರ ಹಿಂದೆ ಹರಿಯಾಣ, ಮಹಾರಾಷ್ಟ, ಜಾರ್ಖಂಡ್, ದೆಹಲಿ ವಿಧಾನಸಭಾ ಚುನಾವಣೆಗಳ ಲೆಕ್ಕಾಚಾರವೂ ಇದೆ ಎನ್ನಲಾಗಿದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror