Advertisement
MIRROR FOCUS

ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

Share

ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು. ಆದರೆ ಅತಿಯಾದ ಮಳೆಯಿಂದ ಆಗುವ ಅನಾಹುತಗಳಾಗುವುದಕ್ಕೆ ಮಲೆನಾಡಿಗರೇ ಕಾರಣ ಎಂದು ರಾಜ್ಯ ಸರ್ಕಾರದ ಸಚಿವರು ಮತ್ತು ಅಧಿಕಾರಿಗಳು ಹೇಳಿಕೆ ನೀಡಿದ್ದರು. ಇದರ ಜೊತೆಗೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟವನ್ನು  ಸೂಕ್ಷ್ಮ ಅರಣ್ಯ ಪ್ರದೇಶ ಎಂದು ಘೋಷಿಸಲು ಕರಡು ಪ್ರತಿ ಸಿದ್ದಪಡಿಸಿದ್ದು ಮತ್ತೆ ಮಲೆನಾಡಿಗರನ್ನು ಅತಂಕಕ್ಕೆ ಸಿಲುಕಿಸಿದೆ ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಅತಿಯಾದ ಮಳೆಯಿಂದ ಆಗುವ ಪ್ರಕೃತಿ ವಿಕೋಪಕ್ಕೆ ಮಲೆನಾಡಿನ ಜನರು ನೇರ ಹೊಣೆಯಲ್ಲ. ಜನರ ಜೀವನಕ್ಕಾಗಿ ಅರಣ್ಯ ಬದಿ ಒತ್ತುವರಿ ಆಗಿದೆ. ಆದರೆ ಅದರಿಂದ ಭೂಕುಸಿತ ಉಂಟಾಗಿಲ್ಲ. ಇದಕ್ಕೆ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಮಿಸಿದ ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿಗಳು, ಅಣೆಕಟ್ಟುಗಳು, ಸೇತುವೆಗಳಿಂದ ಈ ರೀತಿಯ ಭೂಕುಸಿತ ಸಂಭವಿಸಿದೆ. ಅದು ಬಿಟ್ಟು ಯಾವುದೇ ಕೃಷಿ ಚಟುವಟಿಕೆಗಳಿಂದ ಅಲ್ಲ. ಮೊದಲು ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ, ಅಣೆಕಟ್ಟುಗಳನ್ನ, ರಸ್ತೆ ಬದಿಯಲ್ಲಿರುವ ಪೈಪ್‍ಲೈನ್‍ಗಳನ್ನೂ ತೆರವು ಮಾಡಿ. ಅವುಗಳನ್ನು ತೆರವು ಮಾಡಿಲು ನಿಮ್ಮಿಂದ ಸಾಧ್ಯವೇ?’ ಎಂದು ಪ್ರಶ್ನಿಸಿದರು.

ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಚಿವರು ನಮ್ಮ ಮಲೆನಾಡಿಗೆ ಬಂದು ಎರಡು ದಿನ ವಾಸ್ತವ ಹೂಡಿ ಸ್ಥಳೀಯರೊಂದಿಗೆ ಚರ್ಚಿಸಿ ಆಮೇಲೆ ಅವರ ಕೆಲಸ ಆರಂಭಿಸಲಿ. ಪರಿಸರ ಕಾಳಜಿ ನಮಗೂ ಇದೆ. ಎಲ್ಲವನ್ನು ನಾವು ತಿರಸ್ಕರಿಸುವುದಿಲ್ಲ. ಬದುಕಿಗೋಸ್ಕರ ಕೃಷಿ ಮಾಡಿದವರಿಗೆ ಸರ್ಕಾರ ಸಹಾಯ ಮಾಡಲಿ. ಇತ್ತೀಚಿಗೆ ವಿಧಾನ ಸಭೆಯಲ್ಲಿ ಪಾರಂಪರಿಕ ಅರಣ್ಯ ಹಕ್ಕು ಬಗ್ಗೆ ಚರ್ಚಿಸಿ ಕೆಲವು ನಿಯಮಗಳನ್ನು ಸಡಿಲಗೋಳಿಸಿ ಅರಣ್ಯ ವಾಸಿಗಳಿಗೆ ಹಕ್ಕುಪತ್ರ ನೀಡಲು ನಿರ್ಣಯಾ ಮಾಡಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದು ಮತ್ತು ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಸಮ್ಮತಿ ಸೂಚಿಸದೇ ಇರುವು ಸ್ವಾಗತ’ ಎಂದು ಮಲೆನಾಡು ಮತ್ತು ಕರಾವಳಿ ಜನಪರ ಒಕ್ಕೂಟದ ರಾಜ್ಯ ಸಂಚಾಲಕ ಅನಿಲ್ ಹೊಸಕೊಪ್ಪ ಹೇಳಿದರು.

ರಾಜ್ಯ ಸರ್ಕಾರದಷ್ಟೇ ಜವಾಬ್ದಾರಿ ಕೇಂದ್ರ ಸರ್ಕಾರಕ್ಕೆ ಇದೆ. ಆದರಿಂದ ಈ ನಿರ್ಣಯವನ್ನು ನಮ್ಮ ಮಲೆನಾಡಿನ 5 ಜನ ಸಂಸದರು ಬೆಂಬಲಿಸಿ ಮಲೆನಾಡಿಗರ ಬದುಕು ಉಳಿಸಿಕೊಡಬೇಕು. ಇದುವರೆಗೂ ನಮ್ಮ ಯಾವ ಸಂಸದರು ಅರಣ್ಯ ಹಕ್ಕಿನ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ನಮ್ಮ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಲೆನಾಡಿನ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿ ಮಲೆನಾಡಿಗರಿಗೆ ನ್ಯಾಯ ದೊರಕಿಸಿ ಕೋಡಬೇಕು’ ಎಂದು ಒತ್ತಾಯಿಸಿದರು.
ಸಭೆಯಲ್ಲಿ ಮೂಲ ಅರಣ್ಯ ಕಾಯ್ದೆಯನ್ನು ತಿದ್ದುಪಡಿ ಮಾಡಲು ಕೇಂದ್ರ ಹಾಗು ರಾಜ್ಯ ಸರ್ಕಾರಕ್ಕೆ ಒತ್ತಡ ತರುವ ವಿಚಾರದ ಬಗ್ಗೆ ಚರ್ಚಿಸಲಾಯಿತು.

ಸಭೆಯಲ್ಲಿ ಪದಾಧಿಕಾರಿಗಳಾದ ಕಣದಮನೆ ಜಗದೀಶ್, ತ್ರಿಮೂರ್ತಿ, ಕಾಳ್ಯ ಸಂತೋಷ್, ಮಂಜುನಾಥ್ ಮೂಡ್ಲು, ಗುತ್ತುಳಿಕೆ ಕೇಶವ, ರಾಜ್‍ಕುಮಾರ್ ಹೆಗ್ಡೆ, ಅವಿನಾಶ್, ಪ್ರಶಾಂತ್ ಬಂಡ್ಲಪುರ, ಆದೇಶ, ಚೇತನ್ ಹಿಂಬ್ರವಳ್ಳಿ, ಶುಭಕೃತ್ ಹೆಗ್ಡೆ, ಶಶಿಕ್ ಹೊಸಕೋಪ್ಪ , ಸುಬ್ರಮಣ್ಯ ಹರವರಿ ಉಪಸ್ಥಿತರಿದ್ದರು.

The farmers in the hill country and along the coast are fearful due to the forest act. State government ministers and officials have blamed the hill farmers for the disasters caused by heavy rain. Furthermore, the central government is considering declaring the Western Ghats as a sensitive forest area, causing even more fear among the hill dwellers.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

9 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago