ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಗೆ ಕೇಂದ್ರ ಕಡಿವಾಣ | ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ |

March 11, 2023
11:18 AM

ಬೇಸಿಗೆ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿದ್ಯುತ್ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ . ಮುಂಬರುವ ದಿನಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಲಿದ್ದು ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ವಿವಿಧ ಅಂಶಗಳ ಕುರಿತು ವಿದ್ಯುತ್, ಕಲ್ಲಿದ್ದಲು , ಮತ್ತು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ಕೇಂದ್ರ ವಿದ್ಯುತ್ ಸಚಿವ ಅರ್. ಕೆ .ಸಿಂಗ್ ಅವರು ಪರಿಶೀಲನಾ ಸಭೆ ನಡೆಸಿದರು.

Advertisement

ಕೇಂದ್ರ ವಿದ್ಯುತ್ ಪ್ರಾಧಿಕಾರದ ಅಂದಾಜಿನ ಪ್ರಕಾರ , ಈ ವರ್ಷದ ಏಪ್ರಿನಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ 229 ಗಿಗಾ ವ್ಯಾಟ್ ತಲುಪುವ ನಿರೀಕ್ಷೆ ಇದೆ . ದೇಶದ ಧಕ್ಷಿಣ ಭಾಗದಿಂದ ಮುಂಗಾರು ಹಂಗಾಮು ಆರಂಭವಾದಾಗ ಬೇಡಿಕೆ ಕಡಿಮೆಯಾಗುತ್ತದೆ ಮತ್ತು ಅದು ಮುಂದಿನ 3-4 ತಿಂಗಳುಗಳಲ್ಲಿ ಇಡೀ ದೇಶವನ್ನು ಆವರಿಸುತ್ತದೆ .

ಒಂದು ಅಂದಾಜಿನ ಪ್ರಕಾರ ಈ ವರ್ಷದ ಏಪ್ರಿಲ್ ನಲ್ಲಿ 1,42,079 ಮೆಗಾ ಯೂನಿಟ್ ವಿದ್ಯುತ್ ಗೆ ಬೇಡಿಕೆ ಉಂಟಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಈ ವರ್ಷದಲ್ಲೇ ಅತ್ಯಧಿಕವಾಗಿದೆ. ವಿದ್ಯುತ್ ಬೇಡಿಕೆಯು ಮೇ ತಿಂಗಳಲ್ಲಿ 1,41,464 ಮೆ. ಯೂನಿಟ್ ಗೆ ಮತ್ತು ನವೆಂಬರ್‌ನಲ್ಲಿ 1,17,049 ಮೆ. ಯೂನಿಟ್‌ಗೆ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮನೆಯೊಳಗೆ ನುಗ್ಗಿದ ಚಿರತೆ | ಸತತ 5 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ |
April 4, 2025
4:45 PM
by: The Rural Mirror ಸುದ್ದಿಜಾಲ
ರಸ್ತೆ ಸರಕು ಸಾಗಾಣೆಯಲ್ಲೂ ತೀವ್ರ ಏರಿಕೆ  |  ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ
April 4, 2025
2:24 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-04-2025 | ಇಂದು ಕೆಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಎ.7 ರಿಂದ ಮಳೆ ಕಡಿಮೆಯಾಗುವ ಲಕ್ಷಣ |
April 4, 2025
1:10 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ನಾಡಿನಲ್ಲಿ ಉಪಬೆಳೆಯಾಗಿ ತರಕಾರಿ ಕೃಷಿ ಮಾಡಿದ ಯುವಕ
April 4, 2025
8:00 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror

Join Our Group