ಬೇಸಿಗೆ ಸಂದರ್ಭದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿದ್ಯುತ್ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ . ಮುಂಬರುವ ದಿನಗಳಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಲಿದ್ದು ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ವಿವಿಧ ಅಂಶಗಳ ಕುರಿತು ವಿದ್ಯುತ್, ಕಲ್ಲಿದ್ದಲು , ಮತ್ತು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಗಳ ಜೊತೆ ಕೇಂದ್ರ ವಿದ್ಯುತ್ ಸಚಿವ ಅರ್. ಕೆ .ಸಿಂಗ್ ಅವರು ಪರಿಶೀಲನಾ ಸಭೆ ನಡೆಸಿದರು.
ಕೇಂದ್ರ ವಿದ್ಯುತ್ ಪ್ರಾಧಿಕಾರದ ಅಂದಾಜಿನ ಪ್ರಕಾರ , ಈ ವರ್ಷದ ಏಪ್ರಿನಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ 229 ಗಿಗಾ ವ್ಯಾಟ್ ತಲುಪುವ ನಿರೀಕ್ಷೆ ಇದೆ . ದೇಶದ ಧಕ್ಷಿಣ ಭಾಗದಿಂದ ಮುಂಗಾರು ಹಂಗಾಮು ಆರಂಭವಾದಾಗ ಬೇಡಿಕೆ ಕಡಿಮೆಯಾಗುತ್ತದೆ ಮತ್ತು ಅದು ಮುಂದಿನ 3-4 ತಿಂಗಳುಗಳಲ್ಲಿ ಇಡೀ ದೇಶವನ್ನು ಆವರಿಸುತ್ತದೆ .
ಒಂದು ಅಂದಾಜಿನ ಪ್ರಕಾರ ಈ ವರ್ಷದ ಏಪ್ರಿಲ್ ನಲ್ಲಿ 1,42,079 ಮೆಗಾ ಯೂನಿಟ್ ವಿದ್ಯುತ್ ಗೆ ಬೇಡಿಕೆ ಉಂಟಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದು ಈ ವರ್ಷದಲ್ಲೇ ಅತ್ಯಧಿಕವಾಗಿದೆ. ವಿದ್ಯುತ್ ಬೇಡಿಕೆಯು ಮೇ ತಿಂಗಳಲ್ಲಿ 1,41,464 ಮೆ. ಯೂನಿಟ್ ಗೆ ಮತ್ತು ನವೆಂಬರ್‌ನಲ್ಲಿ 1,17,049 ಮೆ. ಯೂನಿಟ್‌ಗೆ ಇಳಿಯಲಿದೆ ಎಂದು ನಿರೀಕ್ಷಿಸಲಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…